Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಾರತ್ತಹಳ್ಳಿ: 18 ಕೋಟಿ ದರೋಡೆ ಕೇಸ್‌ ಗೆ ಬಿಗ್ ಟ್ವಿಸ್ಟ್
  • Bangalore
  • Crime
  • State

ಮಾರತ್ತಹಳ್ಳಿ: 18 ಕೋಟಿ ದರೋಡೆ ಕೇಸ್‌ ಗೆ ಬಿಗ್ ಟ್ವಿಸ್ಟ್

Praja Vahini February 2, 2026
WhatsApp Image 2026-02-02 at 11.58.07
Spread the love

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಮನೆ ಕೆಲಸದವರಿಗೆ ಡಿಮ್ಯಾಂಡ್ ಹೆಚ್ಚಾಗಿದ್ದು, ಸಿಕ್ಕಸಿಕ್ಕವರನ್ನು ಮನೆ ಕೆಲಸಕ್ಕೆ ನೇಮಕ ಮಾಡಿಕೊಂಡರೆ ಮನೆಗೆ ಕನ್ನ ಬೀಳೋದಂತು ಗ್ಯಾರಂಟಿ.

ಹೌದು, ಮನೆ ಕೆಲಸಕ್ಕೆ ಎಂದು ಸಿಕ್ಕಸಿಕ್ಕವರನ್ನ ನೇಮಕ ಮಾಡಿಕೊಂಡರೆ ನಿಮ್ಮ ಮನೆಯಲ್ಲಿರುವ ವಜ್ರ, ಒಡವೆ, ಹಣ ದೋಚುವುದಂತೂ ಗ್ಯಾರಂಟಿ. ಇದಕ್ಕೆ ದೊಡ್ಡ ಉದಾಹರಣೆಗೆ ಎಂಬಂತೆ ಇದೀಗ ಮಾರತಹಳ್ಳಿಯಲ್ಲಿ ನಡೆದಿರುವ ಪ್ರಕರಣವೇ ಒಂದು ಪ್ರಮುಖ ಉದಾಹರಣೆಯಾಗಿದೆ.

ಮಾರತ್ತಹಳ್ಳಿಯಲ್ಲಿ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದಿದ್ದ 18 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಈ ದರೋಡೆಯಲ್ಲಿ ನೇಪಾಳ ಮೂಲದ ಗ್ಯಾಂಗ್‌ ಇರೋದು ಬೆಳಕಿಗೆ ಬಂದಿದೆ.

ನೇಪಾಳದ ಈ ಗ್ಯಾಂಗ್ ಸದಸ್ಯರು ಶ್ರೀಮಂತ ಉದ್ಯಮಿಗಳ ಮನೆಗಳನ್ನು ಟಾರ್ಗೆಟ್‌ ಮಾಡಿ ಮನೆಗೆಲಸಕ್ಕೆ ಸೇರಿಕೊಳ್ಳುತ್ತಿದ್ದರು. ಬಳಿಕ ಅಲ್ಲಿನ ಎಲ್ಲಾ ಚಟುವಟಿಕೆಗಳನ್ನು ತಿಳಿದುಕೊಳ್ಳುತ್ತಿದ್ದರು. ದರೋಡೆ ಮಾಡುವ ಮುನ್ನ ಒಂದು ತಿಂಗಳಲ್ಲಿ ವೈಯಕ್ತಿಕ ಕಾರಣದ ನೆಪ ಹೇಳಿ ಕೆಲಸ ಬಿಡುತ್ತಿದ್ದರು. ಕೆಲಸ ಬಿಡುವ ಮುನ್ನ ಇದೇ ಗ್ಯಾಂಗ್‌, ಇಬ್ಬರನ್ನು ಕೆಲಸಕ್ಕೆ ಸೇರಿಸಿ ಹೋಗಿದ್ದರು. ಅದೇ ರೀತಿ ನಗರದ ಉದ್ಯಮಿ ಶಿವಕುಮಾರ್ ಅವರ ಮನೆಗೂ ಗ್ಯಾಂಗ್‌ನ ಕಮಲ ಹಾಗೂ ದಿನೇಶ್ ಎಂಬವರನ್ನು ಕೆಲಸಕ್ಕೆ ಸೇರಿಸಿದ್ದರು. ಇದನ್ನೂ ಓದಿ: 2ನೇ ಬಾರಿಗೆ ಫಿಲ್ಮ್ ಚೇಂಬರ್ ನ ಅಧ್ಯಕ್ಷೆಯಾಗಿ ಆಯ್ಕೆಯಾದ ನಟಿ ಜಯಮಾಲಾ

ಸಮಯ ನೋಡಿ ಈ ಗ್ಯಾಂಗ್ ಉದ್ಯಮಿಯ ಮನೆ ದರೋಡೆ ಮಾಡಿ ಪರಾರಿಯಾಗಿತ್ತು. ಡಿಸೆಂಬರ್‌ನಲ್ಲಿ ದಿನೇಶ್ ಮತ್ತು ಗ್ಯಾಂಗ್ ಪುಣೆಯಲ್ಲಿ ಶ್ರೀಮಂತ ಉದ್ಯಮಿಯೊಬ್ಬರ ಮನೆಯಲ್ಲಿ ದರೋಡೆ ಮಾಡಿರೋದು ಪತ್ತೆಯಾಗಿದೆ. ಸದ್ಯ ಈ ನೇಪಾಳ ಮೂಲದ ಗ್ಯಾಂಗ್ ಬಗ್ಗೆ ಮಾಹಿತಿ ಕಲೆಹಾಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: 2ನೇ ಬಾರಿಗೆ ಫಿಲ್ಮ್ ಚೇಂಬರ್ ನ ಅಧ್ಯಕ್ಷೆಯಾಗಿ ಆಯ್ಕೆಯಾದ ನಟಿ ಜಯಮಾಲಾ
Next: ಉದ್ಯಮ ಲೋಕದ ಸಾಮ್ರಾಟ ಸಿ.ಜೆ ರಾಯ್ ಆತ್ಮಹತ್ಯೆಯ ಹಿಂದಿನ ದಿನ ನಡೆದಿದ್ದೇನು?

Views:

47

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.