Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಬಿಜೆಪಿಯ ಭ್ರಷ್ಟ ಸರ್ಕಾರದಿಂದ ರಾಜ್ಯದ ಜನತೆಗೆ ಚಂಬು
  • Bangalore
  • Politics
  • State

ಕೇಂದ್ರ ಬಿಜೆಪಿಯ ಭ್ರಷ್ಟ ಸರ್ಕಾರದಿಂದ ರಾಜ್ಯದ ಜನತೆಗೆ ಚಂಬು

Praja Vahini February 2, 2026 1 minute read
WhatsApp Image 2026-02-02 at 16.29.28
Spread the love

ಬೆಂಗಳೂರು: ಕೆಪಿಸಿಸಿ ವಕ್ತರರಾದ ಎಂ.ಲಕ್ಷಣ ರವರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಸ್ ಮನೋಹರ್ ರವರ ನೇತೃತ್ವದಲ್ಲಿ ವಿನೂತನ ರೀತಿ ಪ್ರತಿಭಟನೆ ಹಾಗೂ ಸುದ್ದಿಗೋಷ್ಠಿಯನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಬೆಂಗಳೂರುನಲ್ಲಿ ನಡೆಸಲಾಯಿತು.

ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಘೋಷಿಸಿರುವ ಅನುದಾನಗಳು ಕೇವಲ ಘೋಷಣೆಗಳಾಗಿಯೇ ಉಳಿದಿದ್ದು, ವಾಸ್ತವವಾಗಿ ಹಣ ಬಿಡುಗಡೆಗೊಳಿಸುವಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇದು ಕೇಂದ್ರ ಸರ್ಕಾರದ ಕರ್ನಾಟಕದ ಮೇಲಿನ ನಿರಂತರ ಮಲತಾಯಿ ಧೋರಣೆಯ ಪ್ರತಿಬಿಂಬವಾಗಿದೆ ಎಂದು ಕೆಪಿಸಿಸಿ ವಕ್ತರರಾದ ಎಂ.ಲಕ್ಷಣ ಆರೋಪಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ವರದಿಗಳ ಪ್ರಕಾರ, ಕರ್ನಾಟಕಕ್ಕೆ ₹5,495 ಕೋಟಿ ವಿಶೇಷ ಅನುದಾನ, ₹3,000 ಕೋಟಿ ಪೆರಿಫೆರಲ್ ರಿಂಗ್ ರೋಡ್ ಮತ್ತು ₹3,000 ಕೋಟಿ ಕೆರೆಗಳ ಅಭಿವೃದ್ಧಿಗೆ ಸೇರಿ ಒಟ್ಟು ₹11,495 ಕೋಟಿ ಘೋಷಿಸಲಾಗಿದೆ. ಆದರೆ ಹಣಕಾಸು ಆಯೋಗದ ಶಿಫಾರಸುಗಳ ಅನ್ವಯ ಈ ಮೊತ್ತ ಇನ್ನೂ ಬಾಕಿಯಿದೆ ಎಂದು ಕರ್ನಾಟಕ ಸರ್ಕಾರ ಸ್ಪಷ್ಟವಾಗಿ ಹೇಳುತ್ತಿರುವಾಗ, ಕೇಂದ್ರ ಸರ್ಕಾರ “ಯಾವುದೇ ಬಾಕಿ ಇಲ್ಲ” ಎಂದು ಹೇಳುತ್ತಿರುವುದು ರಾಜ್ಯದ ಜನರನ್ನೇ ದಾರಿ ತಪ್ಪಿಸುವ ಪ್ರಯತ್ನವಾಗಿದೆ. ಈ ಹಣದ ಲೆಕ್ಕಾಚಾರಕ್ಕೆ ಸಂಬಂಧಿಸಿದ ಪಾರದರ್ಶಕ ಹೊಂದಾಣಿಕೆ ಹೇಳಿಕೆಯನ್ನು ಕೇಂದ್ರ ಸರ್ಕಾರ ತಕ್ಷಣವೇ ಬಹಿರಂಗಪಡಿಸಬೇಕು ಎಂದರು.

ಬೆಂಗಳೂರು ಉಪನಗರ ರೈಲು ಯೋಜನೆ ಗೆ ಸಂಬಂಧಿಸಿದಂತೆ, ಒಟ್ಟು ₹15,767 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರದ ಪಾಲಿನ ಅನುದಾನವು ಅತ್ಯಂತ ನಿಧಾನಗತಿಯಲ್ಲಿ ಬಿಡುಗಡೆಗೊಳ್ಳುತ್ತಿದೆ. ಮೇ 31, 2024ರ ತನಕ ರೈಲ್ವೆ ಸಚಿವಾಲಯದಿಂದ ಕೇವಲ ₹500 ಕೋಟಿ ಮಾತ್ರ ಬಿಡುಗಡೆಯಾಗಿರುವುದು ಯೋಜನೆಯ ಮೇಲಿನ ಕೇಂದ್ರದ ನಿರ್ಲಕ್ಷ್ಯದ ಸ್ಪಷ್ಟ ಸಾಕ್ಷಿಯಾಗಿದೆ. ಇದನ್ನೂ ಓದಿ: CCL 2026 ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ ತಂಡ

ನಮ್ಮ ಮೆಟ್ರೋ (BMRCL) ಯೋಜನೆಗೆ ಸಂಬಂಧಿಸಿದಂತೆ, 2024–25ರಲ್ಲಿ ₹4,814.58 ಕೋಟಿ ಇದ್ದ ಕೇಂದ್ರ ಅನುದಾನವನ್ನು 2025–26ರಲ್ಲಿ ₹1,717 ಕೋಟಿಗೆ ಕಡಿತಗೊಳಿಸಿರುವುದು ಬೆಂಗಳೂರು ನಗರದ ಸಾರಿಗೆ ಅಗತ್ಯಗಳ ಮೇಲಿನ ಕೇಂದ್ರ ಸರ್ಕಾರದ ನಿರಾಸಕ್ತಿಯನ್ನು ತೋರಿಸುತ್ತದೆ. ಇದರಿಂದ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಗಂಭೀರ ಹಿನ್ನಡೆ ಉಂಟಾಗಿದೆ.

ಅದೇ ರೀತಿ, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಕೇಂದ್ರ ಬಜೆಟ್ 2023–24ರಲ್ಲಿ ₹5,300 ಕೋಟಿ ಘೋಷಿಸಿದರೂ, ಇದುವರೆಗೆ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೇ ಉತ್ತರ ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರ ಮೋಸ ಮಾಡಿದೆ.

ಈ ಎಲ್ಲಾ ಅಂಶಗಳು ಒಟ್ಟಾಗಿ ನೋಡಿದಾಗ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಅಭಿವೃದ್ಧಿಯನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್ ಪಕ್ಷವು ಕರ್ನಾಟಕದ ಹಿತದೃಷ್ಟಿಯಿಂದ ಬಾಕಿ ಇರುವ ಎಲ್ಲಾ ಅನುದಾನಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಗಟ್ಟಿಯಾಗಿ ಆಗ್ರಹಿಸುತ್ತದೆ.

ಕರ್ನಾಟಕದ ಜನರ ಹಕ್ಕಿಗಾಗಿ, ರಾಜ್ಯದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: CCL 2026 ಚಾಂಪಿಯನ್ ಆದ ಕರ್ನಾಟಕ ಬುಲ್ಡೋಜರ್ಸ್ ತಂಡ
Next: ಆರೋಗ್ಯವಂತ ತಾಯಿಯಿಂದಲೇ ಆರೋಗ್ಯವಂತ ಕುಟುಂಬ: ಡಿಕೆಶಿ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.