ಬೆಂಗಳೂರು: ಕನಕಪುರದಲ್ಲಿರುವ ತಾಯಿ – ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಸೇವೆಗಳ ಗುಣಮಟ್ಟ, ಸೌಲಭ್ಯಗಳು ಹಾಗೂ ಆಡಳಿತಾತ್ಮಕ ಕಾರ್ಯವೈಖರಿಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಸೋಮವಾರ ಫೆಬ್ರುವರಿ 02) ರಂದು ಪರಿಶೀಲಿಸಿದರು.
ನಂತರ ಗರ್ಭಿಣಿಯರು ಮತ್ತು ನವಜಾತ ಶಿಶುಗಳಿಗೆ ಲಭ್ಯವಿರುವ ಚಿಕಿತ್ಸೆ, ಹೆರಿಗೆ ಘಟಕ, ಮಕ್ಕಳ ವಾರ್ಡ್, ಲಸಿಕಾ ವ್ಯವಸ್ಥೆ, ಔಷಧಿ ಲಭ್ಯತೆ ಹಾಗೂ ವೈದ್ಯರು–ನರ್ಸಿಂಗ್ ಸಿಬ್ಬಂದಿಯ ಕಾರ್ಯಕ್ಷಮತೆಯ ಕುರಿತು ಆಸ್ಪತ್ರೆಯ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಇದನ್ನೂ ಓದಿ: ಕೇಂದ್ರ ಬಿಜೆಪಿಯ ಭ್ರಷ್ಟ ಸರ್ಕಾರದಿಂದ ರಾಜ್ಯದ ಜನತೆಗೆ ಚಂಬು
ಇನ್ನು ಇದೇ ವೇಳೆ ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ, ತುರ್ತು ಚಿಕಿತ್ಸಾ ಸಿದ್ಧತೆಗಳು ಮತ್ತು ರೋಗಿಗಳಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಹಾಗೂ ತಾಯಿ-ಮಕ್ಕಳ ಆರೋಗ್ಯ ರಕ್ಷಣೆಗೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸಲಹೆ – ಸೂಚನೆಗಳನ್ನು ನೀಡಿದರು.
