Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ, ರಾಜಕೀಯದಲ್ಲಿ ಏಳು ಬೀಳು ಸಹಜ: ಡಿಕೆಶಿ
  • Bangalore
  • Politics
  • State

ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ, ರಾಜಕೀಯದಲ್ಲಿ ಏಳು ಬೀಳು ಸಹಜ: ಡಿಕೆಶಿ

Praja Vahini February 3, 2026 1 minute read
WhatsApp Image 2026-02-03 at 11.42.09
Spread the love

ಬೆಂಗಳೂರು: ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ. ಯಾರು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ವಿದ್ಯಾರ್ಥಿ ನಾಯಕನಿಂದ ಬೆಳೆದು ಬಂದವನು. ನನ್ನದೇ ಆದ ಮೌಲ್ಯಗಳನ್ನು ಪಾಲಿಸಿಕೊಂಡು, ಉಳಿಸಿಕೊಂಡು ಬಂದಿದ್ದೇನೆ. ಪಕ್ಷ ನನಗೆ ಚಿಕ್ಕ ವಯಸ್ಸಿಗೆ ಟಿಕೆಟ್ ಕೊಟ್ಟಿದ್ದು, ಇಲ್ಲಿಯವರೆಗೂ ಬೆಳೆದಿದ್ದೇನೆ. ರಾಜಕೀಯದಲ್ಲಿ ಏಳು ಬೀಳು ಸಹಜ. ನಾನು ಎಂತೆಂಥಹವರ ಏಳು ಬೀಳು ನೋಡಿದ್ದೇನೆ. ನಾನು ಬಿದ್ದಿದ್ದೇನೆ, ಎದ್ದಿದ್ದೇನೆ, ಜೈಲುವಾಸ ಎಲ್ಲವನ್ನೂ ಅನುಭವಿಸಿದ್ದೇನೆ. ಇನ್ನು ಒಂದು ತಿಂಗಳು ಕಳೆದರೆ ನಾನು ಪಕ್ಷದ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತದೆ ಎಂದು ಡಿಸಿಎಂ  ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ನೀಡುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸಿದಾಗ ಡಿಸಿಎಂ ಅವರು ಮಾರುತ್ತರ ನೀಡಿದರು.

ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ ಎಂದು  ತಿಳಿಸಿದರು.

ಕಳೆದ ಒಂದು ತಿಂಗಳಿಂದ ಡಿ.ಕೆ. ಶಿವಕುಮಾರ್ ಅವರ ಮಾತು, ಟ್ವೀಟ್ ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ ಎಂದು ಅಶೋಕ್ ಹೇಳಿದರು. ಆಗ ಶಿವಕುಮಾರ್ ಅವರು ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಹೌದು ಇಲಿಯಾ ಆಗಿದ್ದಾರೆ: ಆರ್ ಅಶೋಕ್‌ ‌ವ್ಯಂಗ್ಯ

ಸಿಎಂ ಸಿದ್ದರಾಮಯ್ಯ ಅವರು ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ ಅವರು 100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ನಾವಿಬ್ಬರೂ ಪರಸ್ಪರ ಕೈಜೋಡಿಸಿ, ಜತೆಯಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ, ಮುಂದೆಯೂ ಕೆಲಸ ಮಾಡುತ್ತೇವೆ. ನಾವು ಜನಕ್ಕೆ ಮಾತು ಕೊಟ್ಟಿದ್ದು, ಆ ಮಾತನ್ನು ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆಯುತ್ತಿದ್ದೇವೆ, ಮುಂದೆಯೂ ನಡೆಯುತ್ತೇವೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ಮುಂದೆಯೂ ನಿಲ್ಲುತ್ತೇನೆ. ಅವರು ಕೂಡ ಕಷ್ಟ ಕಾಲದಲ್ಲಿ ನನ್ನ ಜತೆ ನಿಲ್ಲಲಿದ್ದಾರೆಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಸಿಎಂ ಸಿದ್ದರಾಮಯ್ಯ ಹೌದು ಇಲಿಯಾ ಆಗಿದ್ದಾರೆ: ಆರ್ ಅಶೋಕ್‌ ‌ವ್ಯಂಗ್ಯ
Next: ಅಬ್ಬಬ್ಬಾ ಮಿಲನ ನಟಿ ಪಾರ್ವತಿ ಹೇಗಿದ್ದರೂ ಹೇಗೆ ಆಗಿದ್ದಾರೆ ನೋಡಿ!

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.