Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾವಿ ಧರಿಸಿದ ಸ್ವಾಮೀಜಿ ಕಳ್ಳಾಟ ಪ್ರಶ್ನಿಸಿದಕ್ಕೆ ಓರ್ವ ಕೊ*ಲೆ
  • Crime
  • Death
  • State
  • ದಕ್ಷಿಣ ಕನ್ನಡ

ಕಾವಿ ಧರಿಸಿದ ಸ್ವಾಮೀಜಿ ಕಳ್ಳಾಟ ಪ್ರಶ್ನಿಸಿದಕ್ಕೆ ಓರ್ವ ಕೊ*ಲೆ

Praja Vahini February 3, 2026
WhatsApp Image 2026-02-03 at 14.56.49
Spread the love

ಕಾರವಾರ: ಇತ್ತೀಚಿನ ದಿನಗಳಲ್ಲಿ ಕಾವಿ ಧರಿಸಿದ ಸ್ವಾಮೀಜಿಗಳ ಕಳ್ಳಾಟ ಹೆಚ್ಚಾಗಿ ಕಂಡುಬರುತ್ತಿದ್ದು, ಇದೀಗ ಗುರೂಜಿ ವೇಷ ಧರಿಸಿ ಮಹಿಳೆ ಒಬ್ಬಳ ಜೊತೆ ಕಳ್ಳಾಟವಾಡುತ್ತಿದ್ದನ್ನು ಪ್ರಶ್ನಿಸಿ ದೂರು ನೀಡಿದ್ದಕ್ಕೆ ಹಲ್ಲೆ ಮಾಡಿ ಓರ್ವ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಹೌದು, ಗುರೂಜಿ ಹೆಸರಿನಲ್ಲಿ ಮಹಿಳೆಯರ ಜೊತೆ ಅಕ್ರಮ ಸಂಬಂಧ ನಡೆಸುತ್ತಿದ್ದ ಕಮಲಾಕರ ಭಟ್​ ಗುರೂಜಿ ವಿಚಾರಿಸಿದ್ದಕ್ಕೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ.

ಇನ್ನು ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದ್ದು, ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಮಲಾಕರ ಭಟ್ ಗುರೂಜಿ ಜೊತೆಗೆ ಸುಚಿತ್ರಾ ಎಂಬ ಮಹಿಳೆ ಅಕ್ರಮ ಸಂಬಂಧ ಹೊಂದಿದ್ದರು. ಸ್ವಾಮೀಜಿ ಜೊತೆ ತಾಯಿಯ ಅಕ್ರಮ ಸಂಬಂಧದ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿದ್ದು, ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ ಕಾರಣ ಕಮಲಾಕರ್​​ ಗುರೂಜಿ, ಸುಚಿತ್ರಾ, ಸುಚಿತ್ರಾ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇದನ್ನೂ ಓದಿ:  ಮಾರ್ಚ್ ಅಂತ್ಯದೊಳಗಾಗಿ ಗ್ರಾಮ ಪಂಚಾಯಿತಿಗಳ ಚುನಾವಣೆ: ಪ್ರಿಯಾಂಕ್ ಖರ್ಗೆ

ಇನ್ನು ಈ ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7 ಜನರನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಮಾರ್ಚ್ ಅಂತ್ಯದೊಳಗಾಗಿ ಗ್ರಾಮ ಪಂಚಾಯಿತಿಗಳ ಚುನಾವಣೆ: ಪ್ರಿಯಾಂಕ್ ಖರ್ಗೆ
Next: ಅಬಕಾರಿ ಇಲಾಖೆಯಲ್ಲಿ ಭರ್ಜರಿ ಭ್ರಷ್ಟಾಚಾರ, ಕಮಿಷನ್ ದಂಧೆ: ಆರ್ ಅಶೋಕ್

Views:

43

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.