ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಹಲವಾರು ಅಕ್ರಮಗಳು ಮತ್ತು ಭ್ರಷ್ಟಾಚಾರ ನಡೆಯುತ್ತಿದ್ದರು ಕೂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ವಿಧಾನಸಭೆಯಲ್ಲಿ ಅಧಿವೇಶನದ ವೇಳೆ ಇಂದು (ಮಂಗಳವಾರ ಫೆ. 03) ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭರ್ಜರಿ ಭ್ರಷ್ಟಾಚಾರ, ಕಮಿಷನ್ ದಂಧೆಯ ಬಗ್ಗೆ ಎಳೆಎಳೆಯಾಗಿ ದಾಖಲೆ ಸಮೇತ ಬಿಚ್ಚಿಟ್ಟಿದ್ದೇನೆ. ಇದನ್ನೂ ಓದಿ: “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ
ಸರ್ಕಾರಕ್ಕೆ ಕಿಂಚಿತ್ತಾದರೂ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಈ ಕೂಡಲೇ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
