ಬೆಂಗಳೂರು: ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಇಂದು (ಮಂಗಳವಾರ ಫೆ. 03) ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿ ಸಂಘದ ವತಿಯಿಂದ ನಿರ್ಮಿಸಲಾಗುತ್ತಿರುವ ಸಮುದಾಯ ಭವನಗಳಿಗೆ ಸಹಾಯಧನ ನೀಡುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷರಾದ ಪುಟ್ಟರಾಜು ಸಿ, ಅಧ್ಯಕ್ಷರಾದ ನಾಗರಾಜ ಎಂ.ಜೆ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಡಿ.ಆರ್, ಉಪಾಧ್ಯಕ್ಷರಾದ ಮಂಜುಶ್ರೀಗೌಡ ಎಸ್.ಎಸ್, ಚಿತ್ರದುರ್ಗ ಜಿಲ್ಲಾ ಒಕ್ಕಲಿಗರ ಸಂಘದ ಗೌರವ ಅಧ್ಯಕ್ಷರಾದ ಎನ್. ಈರಣ್ಣ, ಅಧ್ಯಕ್ಷರಾದ ಜಿ. ಪಿ. ಚೇತನ್, ಪ್ರಧಾನ ಕಾರ್ಯದರ್ಶಿ ಎಸ್. ಜಗನ್ನಾಥ ಅವರು ಇದ್ದರು. ಇದನ್ನೂ ಓದಿ: ಶೀಘ್ರದಲ್ಲೇ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣ: SR ವಿಶ್ವನಾಥ್
