ಬೆಂಗಳೂರು: ಜೆಡಿಎಸ್ ನ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಕುಟುಂಬಕ್ಕೆ ಒಂದಲ್ಲ ಒಂದು ಕಳಂಕಗಳು ಬರುತ್ತಿದ್ದು, ಮತ್ತೆ ಇದೀಗ ಕೆ ಆರ್ ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ರೇವಣ್ಣ ಅವರಿಗೆ ಬಿಗ್ ಶಾಕ್ ನೀಡಿದೆ.
ಹೌದು, ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಇನ್ನು ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಹೆಚ್.ಡಿ.ರೇವಣ್ಣ ಅವರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಮಹತ್ವದ ಆದೇಶ ಹೊರಡಿಸಿದೆ. ವಿಚಾರಣೆ ವೇಳೆ ಹೆಚ್.ಡಿ.ರೇವಣ್ಣ ಪರ ವಕೀಲರು ವಾದ ಮಂಡನೆಗೆ ಕಾಲಾವಕಾಶ ಕೋರಿದರು. ಹಿರಿಯ ವಕೀಲರು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಹಾಜರಿರುವ ಕಾರಣ ಸಮಯ ನೀಡುವಂತೆ ಮನವಿ ಮಾಡಲಾಯಿತು. ಆದರೆ ಈ ಮನವಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಇದನ್ನೂ ಓದಿ: ಕಿದ್ವಾಯಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಚಿಕಿತ್ಸೆ
ಈ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ದೋಷಾರೋಪ ಸಲ್ಲಿಸದಂತೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರೊಂದಿಗೆ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳಿಗೆ ಅಡ್ಡಿಯಾಗಿದ್ದ ಅಡೆತಡೆ ತೆರವಾಗಿದ್ದು, ಪ್ರಕರಣದ ವಿಚಾರಣೆ ಮುಂದುವರಿಯಲು ದಾರಿ ಮುಕ್ತವಾಗಿದೆ.
