ಇತ್ತೀಚಿನ ದಿನಗಳಲ್ಲಿ ಚಿತ್ರರಂಗದಲ್ಲಿ ಹೆಚ್ಚಾಗಿ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಡ್ರಗ್ಸ್ ಪ್ರಕರಣಗಳು ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್, ಮಾಲಿವುಡ್ ಸೇರಿದಂತೆ ಎಲ್ಲಾ ಚಿತ್ರರಂಗದಲ್ಲೂ ಕೂಡ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಅದಕ್ಕೆ ಪ್ರಮುಖ ಸಾಕ್ಷಿ ಎಂದರೆ ತಮಿಳಿನಾಡಿನಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿದ ಅಂಜು ಕೃಷ್ಣ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೌದು, ನಟಿ ಅಂಜು ಕೃಷ್ಣ ಮತ್ತು ಕೆಲವು ತಮಿಳು ಸಿನಿಮಾಗಳಿಗೆ ಸಹಾಯಕಿ ನಿರ್ದೇಶಕಿಯಾಗಿ ಕೆಲಸ ಮಾಡಿರುವ ವಿನ್ಸಿ ನಿವೇತಾ ಅವರುಗಳನ್ನು ತಮಿಳುನಾಡು ಪೊಲೀಸ್ ಇಲಾಖೆಯ ಮಾದಕ ವಸ್ತು ನಿಯಂತ್ರಣ ವಿಭಾಗದ ತಂಡ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಾನಿ ಚೆಲ್ಲಪ್ಪ ಹೆಸರಿನ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ನಡೆದ ಆಪರೇಷನ್ನಲ್ಲಿ ನಟಿ ಸೇರಿದಂತೆ ಇತರರ ಬಂಧನವಾಗಿದೆ.
ಇನ್ನು ವೆಂಕಟೇಶ್ ಎಂಬಾತನನ್ನು ಪೊಲೀಸರೇ ಗ್ರಾಹಕನ ರೀತಿ ಸಂಪರ್ಕ ಮಾಡಿ, ಡ್ರಗ್ಸ್ ಮಾರುವಂತೆ ಹೇಳಿ, ನಿಗದಿತ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಆ ವ್ಯಕ್ತಿ ಬಂದಾಗ ಆತನನ್ನು ಬಂಧಿಸಿ, ಆತನಿಂದ 6 ಗ್ರಾಂ ಮೆಥಾಫೆಟಮೈನ್, 7 ಗ್ರಾಂ ಓಜಿ ಗಾಂಜಾ, 15 ಗ್ರಾಂ ಗಾಂಜಾ, ಸ್ಮೋಕಿಂಗ್ ಬಾಂಗ್, ಸ್ಟ್ಯಾಂಪ್ ಮತ್ತು 9 ಮೊಬೈಲುಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಹೈಕೋರ್ಟ್ ನಿಂದ ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್!
ಆತನ ಮಾಹಿತಿಯ ಮೇರೆಗೆ ಪೊಲೀಸರು ಇತರೆ ಕೆಲವರನ್ನು ಬಂಧಿಸಿದ್ದು, ಈ ವೇಳೆ, ನಟಿ ಅಂಜು ಕೃಷ್ಣ ಮತ್ತು ಸಹಾಯಕಿ ನಿರ್ದೇಶಕಿ ವಿನ್ಸಿ ನಿವೇತಾ ಅನ್ನು ಸಹ ಬಂಧಿಸಲಾಗಿದ್ದು, ಇದೀಗ ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
