ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರಿಗೆ ಮತ್ತಷ್ಟು ಬಂಧನದ ಭೀತಿ ಎದುರಾಗಿದೆ.
ಹೌದು, ಬಿಕ್ಲು ಶಿವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಇಂದು (ಮಂಗಳವಾರ ಫೆಬ್ರವರಿ 10) ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಗೊಳಿಸಿದೆ ಈ ಮೂಲಕ ಶಾಸಕ ಬೈರತಿ ಬಸವರಾಜ್ ಗೆ ಬಂಧನದ ಭೀತಿ ಮತ್ತಷ್ಟು ಎದುರಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಇದರಿಂದ ಯಾವುದೇ ಕ್ಷಣದಲ್ಲಿ ಅವರ ಬಂಧನ ಸಾಧ್ಯತೆ ಇದೆ. ನ್ಯಾಯಾಲಯದ ಈ ಆದೇಶದಿಂದ ತನಿಖಾ ಸಂಸ್ಥೆಗಳಿಗೆ ಶಾಸಕರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲು ಮಾರ್ಗ ಸುಗಮವಾಗಿದೆ.
ಇನ್ನುಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ರೌಡಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಬೈರತಿ ಬಸವರಾಜ್‌ಗೆ ನೇರ ಸಂಪರ್ಕವಿತ್ತು ಎನ್ನಲಾಗಿದೆ. ಹತ್ಯೆಗೆ ಮುನ್ನ ಶಾಸಕರು ಜಗ್ಗನನ್ನು ಹಲವು ಬಾರಿ ಭೇಟಿಯಾಗಿದ್ದರು ಎಂಬ ಮಾಹಿತಿ ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೆಹಲಿಯಿಂದ ಗುಡ್ ನ್ಯೂಸ್ ತರ್ತೀರಾ ಎಂಬ ಪ್ರಶ್ನೆಗೆ ಡಿಕೆಶಿ ಹೇಳಿದ್ದೇನು?
ಆದ್ದರಿಂದ ಶಾಸಕರ ವಿರುದ್ಧ ಕೆಲವು ಮಹತ್ವದ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಹೊರತರಲು ಅವರನ್ನು ಬಂಧಿಸಿ ವಿಚಾರಣೆ ನಡೆಸುವುದು ಅಗತ್ಯ ಎಂದು ಸಿಐಡಿ ಮೂಲಗಳು ತಿಳಿಸಿವೆ.
