Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಧಾನಸೌಧದಲ್ಲಿಯೇ ನಡೆಯಿತು ಭಾರಿ ದೊಡ್ಡ ಕಳ್ಳತನ!
  • Bangalore
  • Crime
  • State

ವಿಧಾನಸೌಧದಲ್ಲಿಯೇ ನಡೆಯಿತು ಭಾರಿ ದೊಡ್ಡ ಕಳ್ಳತನ!

Praja Vahini February 10, 2026 1 minute read
WhatsApp Image 2026-02-10 at 16.50.43
Spread the love

ಬೆಂಗಳೂರು: ಕಳ್ಳರು, ಕಳ್ಳತನ ಮಾಡಲು ಸಾಮಾನ್ಯವಾಗಿ ಶ್ರೀಮಂತರ ಮನೆ ಹಾಗೂ ಚಿನ್ನದ ಅಂಗಡಿ ಸೇರಿದಂತೆ ಇನ್ನೂ ಹಲವು ಜಾಗಗಳಲ್ಲಿ ಕಳ್ಳತನ ಮಾಡಲು ಪ್ರಯತ್ನಿಸುತ್ತಾರೆ. ಆದರೆ ಕರ್ನಾಟಕದಲ್ಲಿ ಹೆಚ್ಚಿನ ಭದ್ರತೆ ಇರುವಂತಹ ಸ್ಥಳಗಳಲ್ಲಿ ಒಂದಾದ ವಿಧಾನಸೌಧದಲ್ಲಿಯೇ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ಸಚಿವ ಭೈರತಿ ಸುರೇಶ್ ಅವರ ಕಚೇರಿಯಲಿ ಸುಮಾರು ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಹೊಂದಿದ್ದ ಕೈಚೀಲ ಕಳವಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ. ಗ್ರೂಪ್ ನೌಕರನನ್ನು ವಿಧಾನಸೌಧದ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವರ ಕಚೇರಿಗೆ ಆಗಮಿಸಿದ್ದ ವೇಳೆ, ತಮ್ಮ ಕೈಚೀಲವನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಆ ಕೈಚೀಲದಲ್ಲಿ ಸುಮಾರು 300 ಗ್ರಾಂ ಚಿನ್ನಾಭರಣ ಮತ್ತು 1.50 ಲಕ್ಷ ರೂ. ನಗದು ಇತ್ತು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ಕಾಣೆಯಾಗಿರುವುದು ಗೊತ್ತಾಗಿದೆ.

ತಕ್ಷಣವೇ ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಚೇರಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ತೆಗೆದುಕೊಂಡು ಹೋಗಿರುವುದು ದೃಢಪಟ್ಟಿದೆ. ಇದನ್ನೂ ಓದಿ: KSDL ಬ್ರ್ಯಾಂಡ್ ಗೆ ಇಂದಿನಿಂದ ನಟಿ ತಮನ್ನಾ ರಾಯಭಾರಿ

ಈ ಮಾಹಿತಿ ಆಧರಿಸಿ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದೆ.

 

About the Author

Praja Vahini

Editor

View All Posts

Spread the love

Post navigation

Previous: KSDL ಬ್ರ್ಯಾಂಡ್ ಗೆ ಇಂದಿನಿಂದ ನಟಿ ತಮನ್ನಾ ರಾಯಭಾರಿ
Next: ಬಜೆಟ್ ಮಂಡನೆಗೆ ಪೂರ್ವಭಾವಿ ಸಭೆ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.