ಬೆಂಗಳೂರು: 2026-27ನೇ ಸಾಲಿನ ಬಜೆಟ್ ಮಂಡನೆಗೆ ಈಗಾಗಲೇ ಎಲ್ಲ ರೀತಿ ತಯಾರಿ ಮಾಡಿಕೊಂಡಿದ್ದು ಇಂದು (ಮಂಗಳವಾರ ಫೆ. 10) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಜೆಟ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯನ್ನು ನಡೆಸಿದರು.
ಇಂಧನ ಇಲಾಖೆ, ಯೋಜನೆ, ಕಾರ್ಯಕ್ರಮ ಸಂಯೋಜನೆ & ಸಾಂಖ್ಯಿಕ ಇಲಾಖೆ, ಕಂದಾಯ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ಇಲಾಖೆಯ ಅನುದಾನದ ಬೇಡಿಕೆ, ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಕಾರ್ಯಕ್ರಮದ ಮಾಹಿತಿ ಪಡೆದು, ಅಗತ್ಯ ಅನುದಾನ ಹಾಗೂ ಬೆಂಬಲ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇದನ್ನೂ ಓದಿ: ವಿಧಾನಸೌಧದಲ್ಲಿಯೇ ನಡೆಯಿತು ಭಾರಿ ದೊಡ್ಡ ಕಳ್ಳತನ!
ಈ ಸಭೆಯಲ್ಲಿ ಇಂಧನ ಇಲಾಖೆ ಸಚಿವರಾದ ಕೆ.ಜೆ.ಜಾರ್ಜ್, ಯೋಜನೆ, ಕಾರ್ಯಕ್ರಮ ಸಂಯೋಜನೆ & ಸಾಂಖ್ಯಿಕ ಇಲಾಖೆ ಸಚಿವರಾದ ಡಿ.ಸುಧಾಕರ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಶಾಸಕರೂ ಆದ ಬಿ.ಆರ್.ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಆರ್ಥಿಕ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
