Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಗುರಿ: ಡಿ.ಕೆ. ಸುರೇಶ್
  • Bangalore
  • Politics
  • State

ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಗುರಿ: ಡಿ.ಕೆ. ಸುರೇಶ್

Praja Vahini February 11, 2026 1 minute read
WhatsApp Image 2026-02-11 at 16.42.13
Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷವು ಸರ್ವ ಧರ್ಮ, ಸರ್ವ ಪಕ್ಷಗಳ ನಾಯಕರನ್ನು ಒಳಗೊಂಡಿದೆ. ಇಲ್ಲಿ ಬಿಜೆಪಿ, ಜನತಾ ದಳ, ಬಿಎಸ್ ಪಿ ಸೇರಿದಂತೆ ಎಲ್ಲರೂ ಇದ್ದಾರೆ. ನಮ್ಮಲ್ಲಿ ಮೊದಲ ಆದ್ಯತೆ ಅವರಿಗೆ. ಹೊರಗಿನಿಂದ ಬಂದವರಿಗೆ ಮೊದಲ ಆದ್ಯತೆ, ಆಮೇಲೆ ಕಾಂಗ್ರಸಿಗರಿಗೆ ಆದ್ಯತೆ. ಅತಿಥಿಗಳನ್ನು ಗೌರವಿಸುವುದೇ ಕಾಂಗ್ರೆಸ್ ಪಕ್ಷದ ಗುರಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ನಗರದಲ್ಲಿ ಇಂದು (ಬುಧವಾರ ಫೆಬ್ರುವರಿ 11) ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಎಲ್ಲರನ್ನು ಗೌರವಿಸುತ್ತದೆ. ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂಬ ಭಾವನೆ ಮುಖ್ಯಮಂತ್ರಿಗಳಿಗೆ ಇರುವುದರಿಂದ ಮಾಡಿರಬಹುದು. ಇದರಲ್ಲಿ ತಪ್ಪೇನಿಲ್ಲ ಎಂದರು.

ದೆಹಲಿ ಪ್ರವಾಸ ಶಿವಕುಮಾರ್ ಅವರಿಗೆ ಹೊಸತಲ್ಲ

ಚುನಾವಣೆ ವಿಚಾರವಾಗಿ ಸಭೆ ಮಾಡಲು ಕರೆದಿದ್ದಾರೆ ಎಂದು ನಿಮಗೆ ಮಾಹಿತಿ ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಆದಾಗ ಮಾತ್ರ ದೆಹಲಿಗೆ ಹೋಗುತ್ತಿಲ್ಲ. ಕಳೆದ 40 ವರ್ಷಗಳಿಂದ ನಿರಂತರವಾಗಿ ದೆಹಲಿಗೆ ಹೋಗುತ್ತಿದ್ದಾರೆ. ತಿಂಗಳಿಗೆ ಒಂದು ಅಥವಾ ಎರಡು ಬಾರಿ ಹೋಗುತ್ತಾರೆ. ಈಗ ಅವರು ಪಕ್ಷದ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳು ಸರ್ಕಾರದ ಕೆಲಸಗಳು ಇರುತ್ತವೆ. ಇನ್ನು ದೆಹಲಿಗೆ ಹೋದಾಗ, ರಾಜಕೀಯವಾಗಿ ಅಲ್ಲದಿದ್ದರೂ ಕುಶಲೋಪರಿ ಚರ್ಚೆಗೆ ಭೇಟಿ ಮಾಡುತ್ತಾರೆ. ಸಂಸತ್ ಅಧಿವೇಶನ ನಡೆಯುತ್ತಿರುವಾಗ ಇಲಾಖೆಗಳಿಗೆ ಸಂಬಂಧಿಸಿದ ಚರ್ಚೆ ಮಾಡಲು ಮಂತ್ರಿಗಳನ್ನು ಭೇಟಿ ಮಾಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ, ಬೆಂಗಳೂರಿನ ವಿಚಾರವಾಗಿ ಚರ್ಚೆ ಮಾಡುತ್ತಾರೆ. ಹೀಗಾಗಿ ದೆಹಲಿ ಪ್ರವಾಸ ಶಿವಕುಮಾರ್ ಅವರಿಗೆ ಹೊಸತಲ್ಲ ಎಂದು ತಿಳಿಸಿದರು.

ಯತೀಂದ್ರ ಅವರ ಮಾತೇ ನಮಗೆ ವೇದವಾಕ್ಯ

ಯತೀಂದ್ರ ಸಿದ್ದಾಮಯ್ಯ ಅವರ ಹೇಳಿಕೆ ವಿಚಾರವಾಗಿ ಡಿಸಿಎಂ ಅವರು ಈಗಾಗಲೇ ಹೇಳಿದ್ದಾರೆ. ಅವರಷ್ಟು ತಿಳುವಳಿಕೆ ಇಲ್ಲ. ಅವರಷ್ಟು ದೊಡ್ಡವರು ನಾವಲ್ಲ. ಅವರು ಏನು ಹೇಳುತ್ತಾರೋ ಅದೇ ವೇದವಾಕ್ಯ ಎಂದು ತಿಳಿಸಿದರು. ಇದನ್ನೂ ಓದಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ನಮಗೆ ಸಿಗುವ ನೋಟೀಸ್ ಯತೀಂದ್ರ ಅವರಿಗೆ ಏಕಿಲ್ಲ ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರಿಗೂ ಒಂದೇ ನೀತಿ ಇರಬೇಕು. ಅವರೇ ಹೈಕಮಾಂಡ್ ಆಗಿರುವುದರಿಂದ ಏನೂ ಸಮಸ್ಯೆ ಇಲ್ಲ” ಎಂದರು.

ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ

ನಾನು ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಹಾಗೂ ಸರ್ಕಾರದ ತೀರ್ಮಾನದಂತೆ ಆಗುತ್ತದೆ. ಇದರಲ್ಲಿ ಲಾಭಿ ಮಾಡಿ ಗಿಟ್ಟಿಸಿಕೊಳ್ಳುವಂತಹದ್ದು ಏನೂ ಇಲ್ಲ. ಇದು ರಾಜ್ಯದ ರೈತರ ಜವಾಬ್ದಾರಿಯುತ ಸಂಸ್ಥೆ. ರೈತರ ಹಿತ ಕಾಯುವುದು ಮುಖ್ಯ. ಅದನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಹಾಗೂ ಸರ್ಕಾರ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧ. ನಾನು ಯಾರಿಗೂ ಈ ಜವಾಬ್ದಾರಿ ಬೇಕು ಎಂದು ಕೇಳುವುದಿಲ್ಲ, ಅದರ ಅಗತ್ಯವಿಲ್ಲ. ಸಂಸದನಾಗಿ ನಾನು ಕೆಲಸ ಮಾಡಿದ್ದೇನೆ, ನನಗೆ ನನ್ನದೇ ಆದ ಜವಾಬ್ದಾರಿ ಇತಿ ಮಿತಿಗಳಿವೆ. ನಾನು ಯಾವುದನ್ನು ಆಸೆಪಟ್ಟು ಕೇಳುವುದಿಲ್ಲ, ಅದರ ಹಿಂದೆ ಹೋಗುವವನೂ ಅಲ್ಲ ಎಂದರು.

 

 

About the Author

Praja Vahini

Editor

View All Posts

Spread the love

Post navigation

Previous: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ
Next: ಶ್ರೀ ಸತ್ಯನಾರಾಯಣ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.