ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತ ಬೈರತಿ ಬಸವರಾಜ್ ಅವರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು, ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಬೈರುತಿ ಬಸವರಾಜ್ ಅವರನ್ನು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇವನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇನ್ನು ಹಲಸೂರು ಕೆರೆ ಸಮೀಪದಲ್ಲಿರುವ ಬಿಕ್ಲು ಶಿವ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ಮನೆ ಎದುರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾರತೀನಗರ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳದಲ್ಲೇ ತಂಗಿ ನಿಗಾವಹಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್!
ಈ ಹಿಂದೆ ಜೀವಭಯ ಇರುವುದಾಗಿ ಬಿಕ್ಲು ಶಿವ ತಾಯಿ ಹೇಳಿಕೆ ನೀಡಿದ್ದರು. ಇದೀಗ ಬೈರತಿ ಬಸವರಾಜ್ ಬಂಧನವಾದ ತಕ್ಷಣವೇ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮನೆ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
