Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕ ಸರ್ಕಾರದಿಂದ ಮತ್ತೊಂದು ಗ್ಯಾರಂಟಿ ಘೋಷಣೆ
  • Politics
  • State
  • ಹಾವೇರಿ

ಕರ್ನಾಟಕ ಸರ್ಕಾರದಿಂದ ಮತ್ತೊಂದು ಗ್ಯಾರಂಟಿ ಘೋಷಣೆ

Praja Vahini February 14, 2026 1 minute read
WhatsApp Image 2026-02-14 at 15.27.03
Spread the love

ಹಾವೇರಿ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1000 ದಿನ ಪೂರೈಸಿರುವುದರಿಂದ ಹಾವೇರಿಯಲ್ಲಿ ಇಂದು (ಶನಿವಾರ ಫೆಬ್ರುವರಿ 14) ರಂದು ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಜನಸೇವೆಯಲ್ಲಿ ಸಾರ್ಥಕ 1000 ದಿನಗಳನ್ನು ಪೂರೈಸಿರುವ ಹಿನ್ನೆಲೆ ಹಾವೇರಿಯಲ್ಲಿ ಹಮ್ಮಿಕೊಂಡಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಭಾಗವಹಿಸಿದ್ದರು.

ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ 1000 ದಿನಗಳ ಸಾಧನೆ, ರಾಜ್ಯದಲ್ಲಿ ದೊಡ್ಡ ಬದಲಾವಣೆಯನ್ನು ತಂದಿದೆ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಹೀಗಾಗಿ ನುಡಿದಂತೆ ನಡೆದು ನಿಮ್ಮ ಆಶೀರ್ವಾದ ಪಡೆಯಲಿಕ್ಕೆ ಇಲ್ಲಿಗೆ ನಾವು ಬಂದಿದ್ದೇವೆ ಎಂದು ಹೇಳಿದರು.

ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಅಂತ ಹೇಳಿದ್ದೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿ ಇದ್ದಿದ್ದಕ್ಕೆ 5 ಗ್ಯಾರಂಟಿಗಳ ಜೊತೆಗೆ ಇದೀಗ 6ನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿಯನ್ನು ನೀಡುತ್ತಿದ್ದೇವೆ.

ರಾಜ್ಯದಲ್ಲಿರುವ ಎಲ್ಲಾ ಭೂ ಮಾಲೀಕರಿಗೆ ನಮ್ಮ ಸರ್ಕಾರ ಪೋಡಿ, ಪಟ್ಟಾ ಹಾಗೂ ಆಸ್ತಿ ದಾಖಲೆಗಳನ್ನು ನೀಡಿದೆ.  5 ಗ್ಯಾರಂಟಿಗಳನ್ನು ಎಲ್ಲಾ ಪಕ್ಷದವರು ಕಾಪಿ ಮಾಡಿದ್ದಕ್ಕೆ, ಇದು ಈ ದೇಶದ ಗ್ಯಾರಂಟಿಯಾಗಿ ಉಳಿದಿದೆ. ಗ್ಯಾರಂಟಿಗಳಿಗೆ ಸಾವಿಲ್ಲ, ಅಭಿವೃದ್ಧಿಗೂ ಸಾವಿಲ್ಲ. ಆದರೆ ಟೀಕೆಗಳಿಗೆ ಸಾವಿದೆ. ಆರೋಪಕ್ಕೆ ಸಾವಿದೆ. ಅಪಪ್ರಚಾರಕ್ಕೆ ಸಾವಿದೆ. ಕೃಷ್ಣಭೈರೇಗೌಡರು ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಜನರ ಋಣವನ್ನು ತೀರಿಸಬೇಕೆಂದು ನಿರ್ಧರಿಸಿದರು. ಇದನ್ನೂ ಓದಿ: ವಿಶ್ವವಿಖ್ಯಾತ ಹಂಪಿ ಉತ್ಸವ 2026 ಉದ್ಘಾಟಿಸಿದ ಸಿಎಂ

ದೇವರು ಕೊಟ್ಟ ಅವಕಾಶದಲ್ಲಿ ನಿಮಗೆ ಭೂಮಿ ಗ್ಯಾರಂಟಿ ಕೊಟ್ಟು ನಿಮ್ಮ ಬದುಕಿನಲ್ಲಿ ಹೊಸ ಧೈರ್ಯವನ್ನು ತುಂಬುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಜನರು ನೆಮ್ಮದಿಯಾಗಿ ಬದುಕುತ್ತಿದ್ದಾರೆ. ವಿಪಕ್ಷದವರು ಭಾವನೆಗಳ ಮೇಲೆ ರಾಜಕೀಯ ಮಾಡಿದರೆ, ನಾವು ಬದುಕಿನ ಮೇಲೆ ರಾಜಕೀಯ ಮಾಡ್ತಿದ್ದೀವಿ. ಜನರ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ನಾಳೆ ಮಾಹಾಶಿವರಾತ್ರಿ ಜಾನಪದ ಜಾಗರಣೆ ಕಾರ್ಯಕ್ರಮ
Next: ದೇಶದ ಇತಿಹಾಸದಲ್ಲೇ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು: ಸಿಎಂ

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.