ಚಾಮರಾಜಪೇಟೆ: ರಾಜ್ಯದಾದ್ಯಂತ ಮಹಾಶಿವರಾತ್ರಿ ಹಬ್ಬವನ್ನ ಬಹಳ ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವರಾತ್ರಿ ಹಬ್ಬದ ಪ್ರಯುಕ್ತ ಇಂದು (ಸೋಮವಾರ ಫೆಬ್ರುವರಿ 16) ಚಾಮರಾಜಪೇಟೆಯ ಶ್ರೀ ಮಲೆಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಅಲ್ಲದೆ ಇದೆ ಸಂದರ್ಭದಲ್ಲಿ ದೇವರಲ್ಲಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್ ಇನ್ನು ಹಲವರು ಉಪಸ್ಥಿತರಿದ್ದರು.
