ಕೋಲಾರ: ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಹಲವು ವಿದೇಶಿಯ ಕಂಪನಿಗಳು ರಾಜ್ಯದಲ್ಲಿ ತಲೆಯೆತ್ತಿದ್ದು, ಮತ್ತೆ ಇದೀಗ ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ಕೂಡ ಕೋಲಾರ ಜಿಲ್ಲೆಯಲ್ಲಿ ಮಿನಿ ಹೆಲಿಕಾಪ್ಟರ್ ತಯಾರಿಸುವ ಘಟಕಕ್ಕೆ ಅಧಿಕೃತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಹೌದು, ಚಿನ್ನದ ನಾಡು ಎಂದು ಹೆಸರುವಾಸಿಯಾಗಿರುವ ಕೋಲಾರ ಜಿಲ್ಲೆಯಲ್ಲಿ ದೇಶದಲ್ಲಿಯೇ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಸುವ ಘಟಕ ಪ್ರಾರಂಭವಾಗಲಿದೆ. ನಾಳೆ ಅಂದ್ರೆ (ಫೆಬ್ರುವರಿ 17) ರಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿ ಈ ಘಟಕವನ್ನು ಉದ್ಘಾಟಿಸಲಿದ್ದಾರೆ
ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡುತ್ತಿರುವುದರಿಂದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್. ರವಿ ಮತ್ತು ಎಸ್ಪಿ ಕನ್ನಿಕಾ ಸಿಕ್ರಿವಾಲ್ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: KSRTC ಪ್ರಯಾಣಿಕರಿಗೆ ಬಿಗ್ ಶಾಕ್
ಅಲ್ಲದೆ ವೇಮಗಲ್ ಕೈಗಾರಿಕಾ ಪ್ರದೇಶವು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಗೆ ಸಮೀಪವಿರುವುದು ಈ ಸ್ಥಳ ಆಯ್ಕೆಗೂ ಪ್ರಮುಖ ಕಾರಣವಾಗಿದೆ. ಈ ಘಟಕ ಆರಂಭದಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಳವಾಗಲಿದ್ದು, ಕೋಲಾರ ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ಮತ್ತಷ್ಟು ವೇಗ ಸಿಗಲಿದೆ.
