ಹಾಸನ: ಸಚಿವ ಕೃಷ್ಣಭೈರೇಗೌಡ ಅವರು ಪ್ರತಿನಿತ್ಯ ಒಂದಲ್ಲ ಒಂದು ಊರು ಅಥವಾ ತಾಲೂಕು ಗಳಿಗೆ ಭೇಟಿ ನೀಡಿ ಅಲ್ಲಿರುವ ಸರ್ಕಾರಿ ಆಸ್ಪತ್ರೆ ಹಾಗೂ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯನ್ನು ಕುದ್ದು ತಾವೇ ಪರಿಶೀಲಿಸುತ್ತಾರೆ.
ಅದರಂತೆ ಇಂದು (ಸೋಮವಾರ ಫೆಬ್ರುವರಿ 16) ರಂದು ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಜೊತೆ ಅವರು ಬಿಸಿಯೂಟ ಸವಿದಿದ್ದಾರೆ.
ಅಲ್ಲದೆ ಚನ್ನಪಟ್ಟಣ ತಾಲೂಕು ಆಸ್ಪತ್ರೆ ಹಾಗೂ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಬಂದಿದ್ದ ರೋಗಿಗಳನ್ನು ವಿಚಾರಿಸಿದರು. ದಿನಾಂಕ ಮೀರಿದ ಔಷಧಿಗಳನ್ನು ಪೂರೈಕೆ ಆಗುವುದನ್ನು ತಡೆಯಲು ಯಾವ ಕ್ರಮ ಕೈಗೊಂಡಿದ್ದೀರಿ? ನೀವು ಔಷಧಿ ತೆಗೆದುಕೊಳ್ಳುವಾಗ ಅದರ ಅವಧಿ ಮುಗಿಯಲು ಇನ್ನೂ ಒಂದು ವರ್ಷ ಅವಧಿ ಇರಬೇಕು. ಈ ಬಗ್ಗೆ ಆನ್‍ಲೈನ್ ವ್ಯವಸ್ಥೆ ಮಾಡಿದ್ದೀರಾ? ಏನಾದರೂ ಆ ರೀತಿ ಖರೀದಿ ಮಾಡಿದರೆ ಯಾರು ಹೊಣೆ ಎಂದು ಆಸ್ಪತ್ರೆ ಸಿಬ್ಬಂದಿಗೆ ಪ್ರಶ್ನಿಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ನಮ್ಮ ಶಿಷ್ಟಾಚಾರಕ್ಕೆ ಅಪಮಾನ ಮಾಡುತ್ತಿದೆ: ಬಿ.ಕೆ ಹರಿಪ್ರಸಾದ್
