ಬೆಂಗಳೂರು: ಇಂದು ಛತ್ರಪತಿ ಶಿವಾಜಿ ಮಹಾರಾಜರ ಅವರ ಜಯಂತಿಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಇಂದು (ಗುರುವಾರ ಫೆಬ್ರವರಿ 19) ರಂದು ಛತ್ರಪತಿ ಶಿವಾಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.
ಬೆಂಗಳೂರಿನ ಗೋಸಾಯಿ ಮಠದಲ್ಲಿ, ಪರಮಪೂಜ್ಯ ವೇದಾಂತ ಆಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ, ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು. ಇದನ್ನೂ ಓದಿ: ಅದ್ದೂರಿಯಾಗಿ ನೆರವೇರಿದ ಶ್ರೀ ಲೋಣಿ ಸಿದ್ಧೇಶ್ವರ ರಥೋತ್ಸವ
ರಾಷ್ಟ್ರಭಕ್ತಿ ಮತ್ತು ಸುಶಾಸನಗಳ ಸಾಕಾರದ ನಿಟ್ಟಿನಲ್ಲಿ, ಹಿಂದೂ ಹೃದಯ ಸಾಮ್ರಾಟ್ ಶಿವಾಜಿ ಮಹಾರಾಜರ ಆದರ್ಶಗಳು ಎಂದೆಂದಿಗೂ ನಮಗೆ ಪ್ರೇರಣೆಯಾಗಿವೆ ಎಂದರು.
