ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ವಿರೋಧ ಪಕ್ಷದ ನಾಯಕರು ಒಂದಲ್ಲ ಒಂದು ಆರೋಪ ಮಾಡುತ್ತಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದರೆ, ‘ಸಿದ್ದರಾಮಯ್ಯ ಪಾಪರ್’ ಅಂತ ಅಧಿಕೃತ ಶ್ವೇತ ಪತ್ರ ಹೊರಡಿಸಲಿ ಎಂದು ಆರ್ ಅಶೋಕ್ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ಬಿಜೆಪಿ ಅವಧಿಯಲ್ಲಿ ಲಾಭದಲ್ಲಿದ್ದ ರಾಜ್ಯ ಸಾರಿಗೆ ಇಲಾಖೆ ಇಂದು ದುಃಸ್ಥಿತಿಗೆ ತಲುಪಿದೆ. ಮಕ್ಕಳನ್ನು ಟಿಪ್ಪರ್ನಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗುವ ಪರಿಸ್ಥಿತಿ ಬಂದಿದೆ. ಇದನ್ನೂ ಓದಿ: ಛತ್ರಪತಿ ಶಿವಾಜಿ ಹಿಂದೂ ಹೃದಯ ಸಾಮ್ರಾಟ: ಬಿವೈವಿ
ಬೆಂಗಳೂರಿನ ಗಾರ್ಬೇಜ್ ಕ್ಲೀನ್ ಮಾಡುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ. ಇನ್ನೂ ಮೂರು ದಿನದಲ್ಲಿ ಕಸ ವಿಲೇವಾರಿ ಸಮಸ್ಯೆ ಸರಿಯಾಗದಿದ್ದರೆ ಬೆಂಗಳೂರು ಗಬ್ಬೆದ್ದು ಹೋಗಲಿದೆ ಎಂದು ವ್ಯಂಗ್ಯವಾಡಿದರು.
