ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ (COTPA) ಉಲ್ಲಂಘನೆಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ತಪಾಸಣಾ ಅಭಿಯಾನವನ್ನು ಕೈಗೊಳ್ಳಲಾಗಿದೆ. ವಾರ್ಡ್ ಸಂಖ್ಯೆ 11, 1, 23, 4 ಮತ್ತು 29ರಲ್ಲಿ ನಗರ ಪಾಲಿಕೆಯ ಅಧಿಕಾರಿಗಳು ತಪಾಸಣೆ ನಡೆಸಿ, ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿದವರಿಂದ ಒಟ್ಟು ರೂ.11,700 ದಂಡವನ್ನು ವಸೂಲಿ ಮಾಡಿದ್ದಾರೆ.
ಈ ವಿಶೇಷ ಅಭಿಯಾನವು ದಿನಾಂಕ:26.02.2026 ರವರೆಗೆ ಮುಂದುವರೆಯಲಿದ್ದು, ನಗರ ಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿ ಕಾನೂನು ಉಲ್ಲಂಘನೆಗಳ ವಿರುದ್ಧ ಕ್ರಮ ಕೈಗೊಂಡು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಇದನ್ನೂ ಓದಿ: ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ: ಪ್ರಿಯಾಂಕ್ ಖರ್ಗೆ
ಇದಲ್ಲದೆ, ಶಿಕ್ಷಣ ಸಂಸ್ಥೆಯ ಸಮೀಪದಲ್ಲಿ ತಂಬಾಕು ಉತ್ಪನ್ನಗಳನ್ನು ವಿತರಿಸುತ್ತಿದ್ದ ಅಂಗಡಿಯನ್ನು ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಮುಚ್ಚುವ ಕ್ರಮ ಕೈಗೊಳ್ಳಲಾಗಿದೆ.
