ಬೆಂಗಳೂರು: ರಾಜ್ಯ ಸರ್ಕಾರವು ವಿಧಾನಸೌಧದ ಒಳಗಡೆ ಮಾಧ್ಯಮದವರನ್ನು ನಿರ್ಬಂಧ ಮಾಡಲಾಗಿದ್ದು, ಈ ಕುರಿತು ಈಗಾಗಲೇ ವಿರೋಧ ಪಕ್ಷದ ನಾಯಕರು ಕೂಡ ಆಕ್ರೋಶ ಹೊರ ಹಾಕಿದ್ದು, ಇದೀಗ ಮಾಧ್ಯಮ ಪ್ರತಿನಿಧಿಗಳು ಇಂದು (ಶುಕ್ರವಾರ ಫೆಬ್ರವರಿ 20) ರಂದು ಸರ್ಕಾರದ ವಿರುದ್ಧ ಮೌನ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.
ಹೌದು, ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳಿಂದ ಮೌನ ಪ್ರತಿರೋಧ ಕೈಗೊಂಡಿದ್ದಾರೆ.
ವಿಧಾನಸೌಧ-ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆ ಬಳಿ ಧರಣಿ ಮಾಡಲಾಗುತ್ತಿದ್ದು, ಮುಖಕ್ಕೆ ಕಪ್ಪು ಬಣ್ಣದ ಬಟ್ಟೆ (ಮಾಸ್ಕ್ ಧರಿಸಿ) ಸರ್ಕಾರದ ವಿರುದ್ಧ ಮೌನ ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ನೆದರ್‌ಲ್ಯಾಂಡ್ಸ್ ಪ್ರಧಾನಿಯವರಿಗೆ ಆತ್ಮೀಯ ಬೀಳ್ಕೊಡುಗೆ
ವಿವಿಧ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಪ್ರತಿಭಟನೆಯನ್ನು ಕೈಗೊಂಡಿದ್ದು, ಈ ಪ್ರತಿಭಟನೆಗೆ ಸರ್ಕಾರ ಸ್ಪಂದಿಸಿ ಮತ್ತೆ ವಿಧಾನಸೌಧದ ಒಳಗಡೆ ಮಾಧ್ಯಮ ಪ್ರತಿನಿಧಿಗಳು ಎಂದಿನಂತೆ ತಮ್ಮ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿ ಕೊಡುತ್ತದೆಯೇ ಎಂದು ಕಾದು ನೋಡಬೇಕಿದೆ.
