ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‘ಬಹಳ ಸಂತೋಷ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾ ಪ್ರತಿಕ್ರಿಯೆ ನೀಡಿದರು.
ಸಿಎಂ ಅವರ ಲೇಖನ ಹಾಗೂ ಟ್ವಿಟರ್ ಪೋಸ್ಟ್ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದರು.
ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ” ಎಂದು ಹೇಳಿದರು.
ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು, ಪರಿಹಾರ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ ಎಂದರು.
