ಬೆಂಗಳೂರು: ದಕ್ಷಿಣ ಕಾಶಿ ಖ್ಯಾತಿಯ ಹುಳಿಮಾವು ಶ್ರೀ ಸ್ಫೂರ್ತಿ ವಿನಾಯಕ ಸಹಿತ ಶ್ರೀ ಸತ್ಯನಾರಾಯಣ ಸ್ವಾಮಿ ದೇವಾಲಯದ 21ನೇ ವರ್ಷದ ವಾರ್ಷಿಕೋತ್ಸವ ಹಾಗೂ 20ನೇ ಬ್ರಹ್ಮರಥೋತ್ಸವ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಫೆಬ್ರವರಿ 22ರಿಂದ ಮಾರ್ಚ್ 2ರವರೆಗೆ ನಡೆಯಲಿವೆ.
ದೇವಾಲಯದಲ್ಲಿ ಪಾಂಚರಾತ್ರ ಆಗಮೋಕ್ತ ವಿಧಾನದಲ್ಲಿ ನವದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮಗಳು, ಬ್ರಹ್ಮರಥೋತ್ಸವ, ವಾಹನೋತ್ಸವಗಳು ಹಾಗೂ ದಿವ್ಯ ಕಲ್ಯಾಣೋತ್ಸವ ಸೇರಿದಂತೆ ವೈಭವಮಯ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಭಕ್ತಾದಿಗಳ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ಟ್ರಸ್ಟಿ ವೇಣುಗೋಪಾಲರು ಮಾತನಾಡಿ, “ಹುಳಿಮಾವು ಕ್ಷೇತ್ರದ ಆಧ್ಯಾತ್ಮಿಕ ಪರಂಪರೆ ಹಾಗೂ ಬ್ರಹ್ಮರಥೋತ್ಸವದ ವೈಭವವನ್ನು ರಾಜ್ಯದ ಜನತೆಗೂ ಪರಿಚಯಿಸುವ ಉದ್ದೇಶದಿಂದ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ” ಎಂದು ತಿಳಿಸಿದರು.
ಮಹೋತ್ಸವದಲ್ಲಿ ಭಾಗವಹಿಸಿ ಶ್ರೀ ಸತ್ಯನಾರಾಯಣ ಸ್ವಾಮಿಯವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವತಿಯಿಂದ ಭಕ್ತರಿಗೆ ಮನವಿ ಮಾಡಲಾಗಿದೆ.
