ಬೆಂಗಳೂರು: ಬೆಂಗಳೂರಿನ ಕೆರೆ ನೀರನ್ನು ಕುಡಿಯಲು ಹಾಗೂ ಸ್ನಾನಕ್ಕೆ ಬಳಸಿ ಎಂದು ಸರ್ಕಾರ ಹೇಳಿಲ್ಲ. ಈ ಕೆರೆಗಳು ಇರುವುದು ಅಂತರ್ಜಲ ಹೆಚ್ಚಳ ಮಾಡಲು. ತಿಪ್ಪಗೊಂಡನಹಳ್ಳಿ ಕೆರೆ ನೀರನ್ನು ಬಿಡ್ಬ್ಯೂ ಎಸ್ ಎಸ್ ಬಿಯಿಂದ ಶುದ್ದಿ ಮಾಡಲಾಗುತ್ತಿದೆ. ಬೆಂಗಳೂರಿನ ಕೆರೆಗಳ ನೀರು ಕುಡಿಯಲು, ಸ್ನಾನಮಾಡಲು ಅಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ನಗರದಲ್ಲಿ ಇಂದು (ಸೋಮವಾರ ಫೆಬ್ರವರಿ 23) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ.
ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ ಎಂದರು. ಇದನ್ನೂ ಓದಿ: ಗೊಂಬೆಯಲ್ಲೇ ತಾಯಿ ಪ್ರೀತಿ ಕಂಡುಕೊಂಡ ʼಪಂಚʼ ಕೋತಿಮರಿ
