ಬೆಂಗಳೂರು: ಬೆಂಗಳೂರು ನಗರದಲ್ಲಿ ಇತ್ತೀಚಿಗೆ ಬೆಂಕಿ ಅವಘಡಗಳು ಹೆಚ್ಚಾಗಿ ಕಾಣುತ್ತಿದ್ದು, ಮತ್ತೆ ಇದೀಗ ಚಿಕ್ಕಪೇಟೆಯಲ್ಲಿರುವ ಮೆಟ್ರೋ ನಿಲ್ದಾಣದ ಬಳಿ ಫ್ಯಾನ್ಸಿ ಸ್ಟೋರ್ ಗೆ ಬೆಂಕಿ ಹತ್ತಿ ಉರಿದ ಕಾರಣ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಹೌದು, ಚಿಕ್ಕಪೇಟೆ ಮೆಟ್ರೋನ್ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ನಡೆದಿದ್ದು, 20 ಅಂಗಡಿಗಳಿದ್ದ ಬಿಲ್ಡಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಳಿಗ್ಗೆ ಸುಮಾರು ಏಳು ಗಂಟೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ದಗದಗನೆ ಉರಿದಿದೆ ಎಂದು ಮೂಲಗಳಿಂದ ತಿಳಿದಿದೆ.
ಇನ್ನು ಸ್ಥಳದಲ್ಲಿ ಅಗ್ನಿಶಾಮಕದಳ ವಾಹನಗಳು ಆಗಮಿಸಿದ್ದು, ದಟ್ಟ ಹೊಗೆ ಆವರಿಸಿಕೊಂಡ ಹಿನ್ನೆಲೆ ಆಕ್ಸಿಜನ್ ಸಿಲಿಂಡರ್, ಮಾಸ್ಕ್ ಧರಿಸಿ ಅಗ್ನಿಶಾಮಕ ಸಿಬ್ಬಂದಿ ಅಂಗಡಿ ಒಳಗೆ ಹೋಗಿ, ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕೆಲಸದ ಕನಸು ಕಾಣುತ್ತಿರುವವರಿಗೆ ಸಿಹಿ ಸುದ್ದಿ ನೀಡಿದ ಪ್ರಿಯಾಂಕ ಖರ್ಗೆ
