ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ರಿಲೀಸ್ ಗೆ ಕೆಲವೇ ಕೆಲವು ದಿನಗಳು ಬಾಕಿ ಇದ್ದು, ಇದೀಗ ಟಾಕ್ಸಿಕ್ ಸಿನಿಮಾದ ಮೊದಲ ಹಾಡನ್ನು ರಿಲೀಸ್ ಮಾಡಿ ಅಭಿಮಾನಿಗಳಿಗೆ ಸಿನಿಮಾ ಮೇಲೆ ಇರುವ ಕುತೂಹಲವನ್ನು ಇನ್ನಷ್ಟು ಕೆರಳಿಸುವಂತೆ ಚಿತ್ರತಂಡ ಮಾಡಿದೆ.
ಹೌದು, ಇತ್ತೀಚಿಗಷ್ಟೇ ಬಿಡುಗಡೆಯಾದ ಟಾಕ್ಸಿಕ್ ಸಿನಿಮಾದ ಟೀಸರ್ ಇಂಟರ್ನೆಟಲ್ಲಿ ಧೂಳು ಎಬ್ಬಿಸಿದ್ದು, ಇದೀಗ ಟಾಕ್ಸಿಕ್ ಚಿತ್ರದ ಮೊದಲ ಹಾಡು ಕೂಡ ಇಂಟರ್ನೆಟ್ನಲ್ಲಿ ಧೂಳ್ ಎಬ್ಬಿಸಲು ಶುರು ಮಾಡಿದೆ.
ತಬಾಹಿಯನ್ನು ಹಾಡನ್ನು ಬಿಡುಗಡೆ ಮಾಡಲಾಗಿದ್ದು ಈ ಹಾಡು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಕನ್ನಡ ಹಾಗೂ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಾಂಗ್ ಬಿಡುಗಡೆಯಾಗಿದೆ. ಇದನ್ನೂ ಓದಿ: ಗಂಡನ ಮನೆ ಸೇರಿದ ರಶ್ಮಿಕಾ ಮಂದಣ್ಣ
ಈ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶಿಸಿದ್ದಾರೆ. ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ರಿಲೀಸ್ ಮಾತ್ರ ಬಾಕಿ ಉಳಿದಿದೆ. ಶೀಘ್ರದಲ್ಲೇ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.
