Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Iran Israel War; ದುಬೈ ನಿಂದ ಸೇಫ್ ಆಗಿ ತಾಯ್ನಾಡು ಸೇರಿದ 500 ಕ್ಕೂ ಹೆಚ್ಚು ಮಂದಿ
  • Bangalore
  • International
  • State

Iran Israel War; ದುಬೈ ನಿಂದ ಸೇಫ್ ಆಗಿ ತಾಯ್ನಾಡು ಸೇರಿದ 500 ಕ್ಕೂ ಹೆಚ್ಚು ಮಂದಿ

Praja Vahini March 3, 2026 1 minute read
WhatsApp Image 2026-03-03 at 13.07.44
Spread the love

ಬೆಂಗಳೂರು: ಕಳೆದ ಹಲವು ದಿನಗಳಿಂದ ಇಸ್ರೇಲ್-ಇರಾನ್ ಮದ್ದೆ ಯುದ್ಧ ಆರಂಭವಾಗಿದ್ದು, ಈ ಯುದ್ಧದಲ್ಲಿ ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇನ್ನು ಇಸ್ರೇಲ್-ಇರಾನ್ ಯುದ್ಧದಿಂದಾಗಿ ದುಬೈ ಮತ್ತು ಅಬುಧಾಬಿಯಲ್ಲಿ ಸಿಲುಕಿದ ನೂರಾರು ಕನ್ನಡಿಗರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿತ್ತು.  ಅದಾದ ಬಳಿಕ ಅಬುಧಾಬಿ ಮತ್ತು ದುಬೈನಲ್ಲಿ ವಿಮಾನ ಹಾರಾಟ ಪ್ರಾರಂಭವಾದ ಮೇಲೆ ಮತ್ತೆ 500ಕ್ಕೂ ಹೆಚ್ಚು ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ತಲುಪಿದ್ದಾರೆ.

ಹೌದು, ಇಸ್ರೇಲ್ ಮತ್ತು ಇರಾನ್ ಯುದ್ಧದ ಪ್ರಭಾವದಿಂದ ದುಬೈನಲ್ಲೂ ಕೂಡ ಬಾಂಬು ದಾಳಿ ಮಾಡಲಾಗಿದ್ದು, ಎರಡು ದಿನಗಳ ಕಾಲ ದುಬೈ ಸೇರಿದಂತೆ ಹಲವು ಕಡೆಗಳಲ್ಲಿ ವಿಮಾನ ಹಾರಟ ರದ್ದು ಮಾಡಲಾಗಿತ್ತು.

ವಿಮಾನ ಹಾರಾಟ ರದ್ದು ಮಾಡಲಾಗಿದ್ದ ಕಾರಣಕ್ಕಾಗಿ ಹಲವು ಕನ್ನಡಿಗರು ಅಬುಧಾಬಿ ಸೇರಿದಂತೆ ದುಬೈನಲ್ಲಿ ಸಿಲುಕಿಕೊಂಡಿದ್ದರು. ಸೋಮವಾರದಿಂದ (ಮಾ. 0) ಮತ್ತೆ ಎಂದಿನಂತೆ ದುಬೈ ಮತ್ತು ಅಬುಧಾಬಿಯಲ್ಲಿ ವಿಮಾನ ಹಾರಾಟ ಪ್ರಾರಂಭವಾಗಿದ್ದು ಇಂದು (ಮಂಗಳವಾರ ಮಾರ್ಚ್ 03) ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸೇಫ್ ಆಗಿ ತಲುಪಿದ್ದಾರೆ.

ಸೋಮವಾರ ರಾತ್ರಿ 10 ಗಂಟೆ ಹೊತ್ತಿಗೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 210 ಪ್ರಯಾಣಿಕರು ಸೇಫಾಗಿ ಲ್ಯಾಂಡ್‌ ಆಗಿದ್ದರು. ಮಂಗಳವಾರ (ಇಂದು) ಬೆಳಗ್ಗಿನ ಜಾವ 3:20 ಕ್ಕೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 300 ಕ್ಕೂ ಹೆಚ್ಚು ಕನ್ನಡಿಗರು ತಾಯ್ನಾಡಿಗೆ ಮರಳಿ, ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಸರ್ಕಾರ ಕೂಡಲೆ ವಾಪಸ್ ಕರೆತರುವ ಕೆಲಸ ಮಾಡಬೇಕು: ಬೊಮ್ಮಾಯಿ

ಯುದ್ಧದ ಪರಿಸ್ಥಿತಿಯಿಂದಾಗಿ ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ದುಬೈ, ಅಬುಧಾಬಿ, ರಿಯಾದ್‌, ಜೆಡ್ಡಾ, ದೋಹಾ ಮತ್ತಿತರ ನಗರಗಳ ವಾಯುಪ್ರದೇಶಗಳನ್ನ ನಿರ್ಬಂಧಿಸಲಾಗಿತ್ತು. ಈ ಕಾರಣದಿಂದಾಗಿ ಶನಿವಾರದಿಂದ ಮಧ್ಯಪ್ರಾಚ್ಯದಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಹಾರಾಟವನ್ನ ಸ್ಥಗಿತಗೊಳಿಸಲಾಗಿತ್ತು. ಸೋಮವಾರ (ನಿನ್ನೆ) ಬೆಳಗ್ಗೆಯಿಂದ ಪರಿಸ್ಥಿತಿ ಆಧರಿಸಿ ವಿಮಾನ ಸೇವೆ ಮರುಸ್ಥಾಪಿಸಲು ನಿರ್ಧರಿಸಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಇಂಟರ್ನೆಟ್‌ನಲ್ಲಿ ಧೂಳ್ ಎಬ್ಬಿಸುತ್ತಿದೆ ಟಾಕ್ಸಿಕ್ ಸಿನಿಮಾದ ಮೊದಲ ಸಾಂಗ್
Next: ನಾಳೆ ರಶ್ಮಿಕಾ- ವಿಜಯ್ ರಿಸೆಪ್ಷನ್ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿದ ಈ ನವಜೋಡಿಗಳು

Views:

107

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.