Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
  • Bangalore
  • Front news
  • Politics
  • State

ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

Praja Vahini March 5, 2026 1 minute read
IMG_0862
Spread the love

ಬೆಂಗಳೂರು: ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ.

17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ.

ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಿನಾಂಕ 06 ಮಾರ್ಚ್ 2026ರಂದು ವಿಧಾನಸೌಧದಲ್ಲಿ ರಾಜ್ಯದ ಬಜೆಟ್ ಮಂಡಿಸಲಿದ್ದಾರೆ.

ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇರುವ ತನ್ನ ಡಿಜಿಟಲ್ ಡಿಸ್ಪ್ಲೇ (LED) ಪರದೆಗಳ ಮೂಲಕ ನೇರ ಪ್ರಸಾರ ಮಾಡಲು ಮುಂದಾಗಿದೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ಬಳಿಕ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ನೇರ ಪ್ರಸಾರವನ್ನು ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ಜನರು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತದೆ.

ಈ ಮೂಲಕ ರಾಜ್ಯದ ಜನತೆಗೆ ಸರ್ಕಾರದ ಬಜೆಟ್ ಕುರಿತು ನೇರವಾಗಿ ಮಾಹಿತಿ ಪಡೆಯುವ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

About the Author

Praja Vahini

Editor

View All Posts

Spread the love

Post navigation

Previous: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿಗೆ ಪಣ ತೊಟ್ಟು ಹೊರಟಿದ್ದೇವೆ: ಬಿ.ವೈ.ವಿ
Next: ರಾಜ್ಯದ ಇತಿಹಾಸದಲ್ಲೇ ಸಿಎಂ ಸಿದ್ದು ಹೆಚ್ಚು ಬಜೆಟ್ ಮಂಡನೆ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.