ಬೆಂಗಳೂರು: ಬಹು ದಿನಗಳಿಂದ ಯುವ ಪೀಳಿಗೆಗಳು ಸರ್ಕಾರದ ಕೆಲಸ ಪಡೆಯಬೇಕೆಂದು ಕನಸು ಕಾಣುತ್ತಿರುವ ಯುವ ಪೀಳಿಗೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಮಾರ್ಚ್ 06) ಮಂಡಿಸಿದ ಬಜೆಟ್ ನಲ್ಲಿ ಸಿಹಿ ಸುದ್ದಿಯನ್ನು ನೀಡಿದ್ದು, ರಾಜ್ಯದಲ್ಲಿ ಹಲವು ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ನಲ್ಲಿ ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ನಾವು ಆದ್ಯತೆ ನೀಡಿದ್ದೇವೆ. ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರಿ-ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಜೆಟ್ ನಲ್ಲಿ ಮಹತ್ವದ ಘೋಷಣೆ
ಉದ್ಯೋಗ ನೇಮಕಾತಿಗಳಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಪರಿಗಣಿಸಿ ವಯೋಮಿತಿಯಲ್ಲಿ ಒಂದು ಬಾರಿಗೆ ಐದು ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಹೇಳಿದ್ದಾರೆ.
