Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯಡಿಯೂರಪ್ಪ, ಬೊಮ್ಮಾಯಿ ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟದ್ದು: ಡಿಕೆಶಿ
  • Bangalore
  • Politics
  • State

ಯಡಿಯೂರಪ್ಪ, ಬೊಮ್ಮಾಯಿ ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟದ್ದು: ಡಿಕೆಶಿ

Praja Vahini March 6, 2026 1 minute read
WhatsApp Image 2026-03-06 at 17.04.11
Spread the love

ಬೆಂಗಳೂರು: ನಾನು ಹಾಗೂ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಸೇರಿ ಈ ಅಧಿವೇಶನದ ವೇಳೆ ಮುಖ್ಯಮಂತ್ರಿಗಳ ಜೊತೆ ಗುತ್ತಿಗೆದಾರರ ಸಭೆ ಮಾಡಿಸುತ್ತೇವೆ. ನಿಮ್ಮ ಸಮಸ್ಯೆ ಬಗೆಹರಿಸಲು ನಾವೆಲ್ಲ ಸೇರಿ ಪರಿಹಾರ ಕಂಡುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ನಿರತರಾಗಿದ್ದ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದವರನ್ನು ಉದ್ದೇಶಿಸಿ ಇಂದು (ಶುಕ್ರವಾರ ಮಾರ್ಚ್‌ 06) ಮಾತನಾಡಿದ ಅವರು, ಗುತ್ತಿಗೆದಾರರು ತಮ್ಮ ಬದುಕಿಗೆ ಮಾತ್ರವಲ್ಲ ರಾಜ್ಯದ ಬದುಕಿಗೆ ಸಹಾಯ ಮಾಡುತ್ತಿದ್ದೀರಿ. ನಮ್ಮ ಸರ್ಕಾರ ತಂದಿದ್ದೀರಿ ಎಂಬ ಅರಿವು ನಮಗಿದೆ. ನಿಮಗೆ ಹಣ ಪಾವತಿ ಮಾಡಬಾರದು ಎಂಬುದು ನಮ್ಮ ಉದ್ದೇಶವಲ್ಲ.

ನಿಮ್ಮ ಅಧ್ಯಕ್ಷರಾದ ಮಂಜುನಾಥ್ ಅವರ ನ್ಯಾಯ ನಾನು ನೋಡುತ್ತಲೇ ಇದ್ದೇನೆ, ಮೂರು ತಿಂಗಳಿಗೊಮ್ಮೆ ಮಾಧ್ಯಮಗಳಿಗೆ ಒಂದೊಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಅವರನ್ನು ನೋಡಿದರೆ ನೀವು ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಒಂದು ಜಾಗ ಕೊಡಿಸಬೇಕು. ವಿಧಾನ ಪರಿಷತ್ತಿನಲ್ಲಿ ಶಿಕ್ಷಕರ ಕ್ಷೇತ್ರ, ಪದವೀಧರ ಕ್ಷೇತ್ರ, ಸಿನಿಮಾ, ಕಲೆ ಸೇರಿದಂತೆ ಇತರೆ ವಲಯದವರಿಗೆ ಒಂದು ಪ್ರಾತಿನಿಧ್ಯ ನೀಡಿದಂತೆ ಗುತ್ತಿಗೆದಾರರಿಗೆ ಒಂದು ಜಾಗ ಕೊಡಿಸಬೇಕಿದೆ. ಆಗ ನಿಮ್ಮ ಸಮಸ್ಯೆ ಬಗೆಹರಿಯಬಹುದು. ಇದಕ್ಕೆ ಒಂದು ದಾರಿ ಹುಡುಕಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ

ನನ್ನ ಇಲಾಖೆಯಲ್ಲಿ 13 ಸಾವಿರ ಕೋಟಿ, ಬೋಸರಾಜು ಅವರ ಇಲಾಖೆಯಲ್ಲಿ 3 ಸಾವಿರ ಕೋಟಿ, ಸೇರಿದಂತೆ ಸುಮಾರು 37 ಸಾವಿರ ಕೋಟಿ ಬಿಲ್ ಬಾಕಿ ಇದೆ. ನಿಮ್ಮ ನೋವು ನಮಗೆ ಗೊತ್ತಿದೆ. ನಾನು ಚುನಾವಣೆಗೂ ಆರು ತಿಂಗಳು ಮುಂಚಿತವಾಗಿ ಹೇಳಿದ್ದೆ. ಇಲಾಖೆಗಳಲ್ಲಿ ಹಣವಿಲ್ಲದೆ ಯಾವುದೇ ಗುತ್ತಿಗೆ ಕಾಮಗಾರಿ ತಗೆದುಕೊಳ್ಳಬೇಡಿ ಎಂದು ಎಚ್ಚರಿಸಿದ್ದೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರು ಹಣ ಇರಲಿ, ಬಿಡಲಿ, ಕಾಮಗಾರಿ ಕೊಟ್ಟಿದ್ದೇ ಕೊಟ್ಟದ್ದು. ನೀವು ಕೆಲಸ ತೆಗೆದುಕೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ. ಇದಕ್ಕೆ ಒಂದು ರೂಪ ನೀಡಬೇಕಿದೆ. ಇದಕ್ಕೆ ಸುಮಾರು 50 ಸಾವಿರ ಕೋಟಿಯಷ್ಟು ಬಾಂಡ್ ಅಥವಾ ಇತರೆ ಮಾರ್ಗ ಹುಡುಕಬೇಕು. ಆಗ ಮಾತ್ರ ಈ ಸಮಸ್ಯೆ ಬಗೆಹರಿಯಲಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಿಕ್ಕಿತು ಬಜೆಟ್‌ ಬಲ
Next: ಕೇಂದ್ರ ಸರ್ಕಾರದ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ: ಸಿಎಂ

Views:

52

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.