ದೆಹಲಿ: ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಹೆಚ್ಚಾಗಿದ್ದು ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ.
ಹೌದು, ತಿನ್ನುವ ಪದಾರ್ಥಗಳಿಂದ ಹಿಡಿದು ಇದೀಗ ಪ್ರತಿಯೊಂದು ವಸ್ತುವಿನ ಬೆಲೆ ಹೆಚ್ಚಾಗಿದ್ದು ಮತ್ತೆ ಇದೀಗ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಾಗಿದೆ.
ಇನ್ನು ಗೃಹ ಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ ದರ 60 ರೂ. ಏರಿಕೆಯಾದರೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರ 115 ರೂ. ಏರಿಕೆಯಾಗಿದೆ. ಇದನ್ನೂ ಓದಿ: ಯಶ್ ಹೊಸ ಲುಕ್ಕಿಗೆ ಫಿದಾ ಆದ ಫ್ಯಾನ್ಸ್
ಪರಿಷ್ಕೃತ ದರ ಇಂದಿನಿಂದಲೇ (ಶನಿವಾರ ಮಾರ್ಚ್ 07) ಜಾರಿಗೆ ಬಂದಿದೆ. ದರ ಏರಿಕೆಯಿಂದ ಹೋಟೆಲ್, ರೆಸ್ಟೋರೆಂಟ್, ಸಣ್ಣ ವಾಣಿಜ್ಯ ಸಂಸ್ಥೆಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.
