ಬೆಂಗಳೂರು: ಇತ್ತೀಚೆಗೆ ದೇಶದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರಗಳಲ್ಲಿ ಮತ್ತೊಮ್ಮೆ ಪರಿಷ್ಕರಣೆ ಮಾಡಿ, ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ ₹60 ಹಾಗೂ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು ₹115 ರಷ್ಟು ಹೆಚ್ಚಳ ಮಾಡಿರುವುದು ದೇಶದ ಬಡ ಹಾಗೂ ಮಧ್ಯಮ ವರ್ಗದ ಜನರ ಮೇಲೆ ಮತ್ತೊಂದು ಭಾರೀ ಹೊರೆ ಹಾಕಿದಂತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಮೇಲೆ ಮಾತನಾಡಿದ ಕಾಂಗ್ರೆಸ್ ಮುಖಂಡರು, ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಈ ನಿರ್ಧಾರ ದೊಡ್ಡ ಹೊಡೆತವಾಗಿದೆ.
ಚುನಾವಣೆಯ ಮುನ್ನ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಅವಶ್ಯಕ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಿ ನಂತರ ಬೆಲೆ ಏರಿಕೆ ಮಾಡುವುದು ನರೇಂದ್ರ ಮೋದಿ ರವರ ತಂತ್ರಗಾರಿಕೆಯಾಗಿದೆ, ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತೇವೆ ಮತ್ತು ದೇಶವನ್ನು ಆರ್ಥಿಕವಾಗಿ ಶಕ್ತಿಶಾಲಿ ರಾಷ್ಟ್ರವನ್ನಾಗಿ ರೂಪಿಸುತ್ತೇವೆ ಎಂಬ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಬಿಜೆಪಿ ಸರ್ಕಾರವು ಇಂದು ತನ್ನದೇ ಮಾತುಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
2014ರಿಂದ 2025ರ ಅವಧಿಯಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಸಂಭವಿಸಿರುವ ನಿರಂತರ ಏರಿಕೆ ಸಾಮಾನ್ಯ ಕುಟುಂಬಗಳ ಜೀವನವನ್ನು ದುಬಾರಿಯಾಗಿಸಿದ್ದು, ಸಬ್ಸಿಡಿ ವ್ಯವಸ್ಥೆಯನ್ನು ಕ್ರಮೇಣ ಕಡಿಮೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸರ್ಕಾರ ಆರ್ಥಿಕ ಹೊರೆ ಹಾಕಿರುವುದು ಅತ್ಯಂತ ಖಂಡನೀಯ ಎಂದರು. ಇದನ್ನೂ ಓದಿ: ಇನ್ನೆರಡು ಬಜೆಟ್ ಅನ್ನು ನಾನೇ ಮಂಡಿಸುತ್ತೇನೆ ಸಿಎಂ ಅಚ್ಚರಿ ಹೇಳಿಕೆ!
ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ mei ಅಧ್ಯಕ್ಷರಾದ ಎಸ್. ಮನೋಹರ್, ಮಾಧ್ಯಮ ವಕ್ತಾರರಾದ ಆನಂದ್ ಕುಮಾರ್ ಎಂ ಎಸ್, ಕಾಂಗ್ರೆಸ್ ಮುಖಂಡರು ಗಳಾದ ಸುಂಕದಕಟ್ಟೆ ನವೀನ್, ಓಬಳೇಶ್, ಚಿನ್ನಿ ಪ್ರಕಾಶ್ ಹೇಮರಾಜ್,ಪುಟ್ಟರಾಜು, ಉಮೇಶ್, ರಂಜಿತ್, ಸಂಜಯ್ ,ಸಾಯಿ ನವೀನ್, ಸ್ಯಾಮ್ಯುವೇಲ್, ಪ್ರವೀಣ್, ಅಪ್ಪಾರಾಯ್, ಪವನ್, ಮತ್ತು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.
