ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ಒಂದರ ಮೇಲೊಂದು ಇತಿಹಾಸ ಸೃಷ್ಟಿಸಿದ್ದು ಇದೀಗ ಟಿ 20 ಫೈನಲ್ ನಲ್ಲಿ ಟೀಮ್ ಇಂಡಿಯಾ ಮತ್ತೊಂದು ಇತಿಹಾಸದ ದಾಖಲೆಯನ್ನು ಸೃಷ್ಟಿಸಿದೆ.
ಹೌದು, ನಿನ್ನೆ (ಭಾನುವಾರ ಮಾರ್ಚ್ 08) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 96 ರನ್ಗಳ ಭರ್ಜರಿ ಜಯ ಸಾಧಿಸಿ ಭಾರತ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಟಿ20 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿಯಾಗಿ ಗೆಲವು ಸಾಧಿಸಿದೆ.
ಇದರಿಂದ ಇಡೀ ದೇಶದಾದ್ಯಂತ ಕ್ರಿಕೆಟ್ ಅಭಿಮಾನಗಳು ಎಲ್ಲೆಡೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ದಾರೆ.
