ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ತಮ್ಮ ರಾಜಕೀಯ ರಂಗದಲ್ಲಿ ಇದೀಗ ಇತಿಹಾಸವನ್ನ ಸೃಷ್ಟಿಸಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ತುಂಬಿರುವುದರಿಂದ ಎಲ್ಲಾ ಶಾಸಕರಿಗೂ ಔತಣಕೂಟವನ್ನು ಏರ್ಪಡಿಸಲಾಗಿದೆ.
ಇನ್ನು ಡಿಕೆ ಶಿವಕುಮಾರ್ ಅವರು ಕೆಲವು ದಿನಗಳ ಹಿಂದೆ ತಮ್ಮ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಇಂದಿನ ಡಿನ್ನರ್ ಮೀಟಿಂಗ್ ಯಾವೆಲ್ಲಾ ಹೊಸ ತಿರುವು ಪಡೆದುಕೊಳ್ಳುತ್ತದೆ ಎಂದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.
ಹೌದು, ಇಂದಿನ ಡಿನ್ನರ್ ಮೀಟಿಂಗ್ ಜೊತೆ ಮಹತ್ವದ ಘೋಷಣೆ ಅಥವಾ ಸ್ಪಷ್ಟ ಸಂದೇಶ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಉನ್ನತ ಶ್ರೇಣಿ ಬರಲು ಶ್ರಮವಹಿಸಿ ಕಾರ್ಯನಿರ್ವಹಿಸಿ: ಮಹೇಶ್ವರ್ ರಾವ್
ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಮ್ಮ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಭೋಜನಕೂಟ ಆಯೋಜಿಸಲಾಗುವುದು. ಅಧಿವೇಶನದ ನಡುವೆಯೇ ಶಾಸಕರಿಗೆ ಭೋಜನಕೂಟ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
