ಗುರುಗ್ರಾಮ: ಇತ್ತೀಚಿನ ದಿನಗಳಲ್ಲಿ ಕಳಪೆ ಕಾಮಗಾರಿಗಳಿಂದ ಕಟ್ಟಡಗಳು ಕೂಸಿದು ಕಾರ್ಮಿಕರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಅದರಂತೆ ಇದೀಗ ಮತ್ತೆ ನಿರ್ಮಾಣ ಹಂತದಲ್ಲಿರುವ ಗೋಡೆ ಕುಸಿತದಿಂದ ಏಳು ಕಾರ್ಮಿಕರು ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಹೌದು, ಸಿಧ್ರಾವಲಿ ಪ್ರದೇಶದ ಸಿಗ್ನೇಚರ್ ಗ್ಲೋಬಲ್ ಸೊಸೈಟಿಯಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ (ಸೋಮವಾರ ಮಾರ್ಚ್ 09) ಸಂಜೆ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹಲವಾರು ಕಾರ್ಮಿಕರು ಟನ್ಗಳಷ್ಟು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗೋಡೆ ಇದ್ದಕ್ಕಿದ್ದಂತೆ ಕುಸಿದಾಗ ಸುಮಾರು 12 ರಿಂದ 15 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋದರು, ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಭಿವಾಡಿಯ ಆಸ್ಪತ್ರೆಗೆ ಕಳುಹಿಸಲಾಯಿತು. ಅದರಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ. ಮೃತರನ್ನು ಸತೀಶ್, ಭಾಗೀರಥ, ಮಿಲನ್, ಶಿವಶಂಕರ್, ಮಂಗಲ್ ಮತ್ತು ಪರಮೇಶ್ವರ್ ಎಂದು ಗುರುತಿಸಲಾಗಿದೆ. ಎಲ್ಲಾ ಮೃತರ ಕುಟುಂಬಗಳನ್ನು ಸಂಪರ್ಕಿಸಲು ಇನ್ನೂ ಪ್ರಯತ್ನಗಳು ನಡೆಯುತ್ತಿವೆ. ಇದನ್ನೂ ಓದಿ: ಡಿಕೆಶಿ KPCC ಅಧ್ಯಕ್ಷರಾಗಿ 6ನೇ ವರ್ಷದ ಸಂಭ್ರಮ: ಕುತೂಹಲ ಮೂಡಿಸಿದ ಡಿನ್ನರ್ ಪಾರ್ಟಿ
ಕಟ್ಟಡ ಕುಸಿತದ ಕಾರಣವನ್ನು ಅಧಿಕಾರಿಗಳು ತನಿಖೆ ಮುಂದುವರಿಸಿರುವುದರಿಂದ ವೈದ್ಯಕೀಯ ತಂಡಗಳು ಅವರನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
