ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಎಫೆಕ್ಟ್ ಇದೀಗ ಭಾರತದ ಮೇಲು ಪ್ರಭಾವ ಬೀರಿದ್ದು ಗ್ಯಾಸ್ ಸಿಲಿಂಡರ್ ಅಭಾವ ಹೆಚ್ಚಾಗುತ್ತಿದೆ.
ಇನ್ನು ಅಡಿಗೆ ಅನಿಲ ಕುರಿತು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ಇಂದು (ಶುಕ್ರವಾರ ಮಾರ್ಚ್ 13) ವಿಧಾನ ಸೌಧದ ಕೊಠಡಿಯಲ್ಲಿ IOC, BPC, HPC, GAIL ನ ಸಂಸ್ಥೆಗಳ ಅಧಿಕಾರಿಗಳು ಹಾಗೂ ಹೊಟೆಲ್ ಮಾಲಿಕರ ಸಂಘದ ಅಧ್ಯಕ್ಷರೊಂದಿಗೆ ಸಭೆಯನ್ನು ನಡೆಸಿದರು. ಇದನ್ನೂ ಓದಿ: ಅಂತರಾಷ್ಟ್ರೀಯ ಯುದ್ದದ ಕಾರಣದಿಂದ ಅನಿಲದ ಸಮಸ್ಯೆ ಉಂಟಾಗಿದೆ: ಮುನಿಯಪ್ಪ
ಈ ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್,ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ,ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್,ಪ್ರಣಯ ದೇವನಾಗನ್,ರವಿಕುಮಾರ್ ತಂಡಲ್,ಪ್ರಸೂನ್ ಮಾಲಿ ಹಾಗೂ ನಿಗಮದ ಪ್ರಧಾನ ವ್ಯವಸ್ಥಾಪಕರಾದ ಮಂಜುನಾಥ್, ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
