Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬೊಮ್ಮಾಯಿ
  • Bangalore
  • Politics
  • State

ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬೊಮ್ಮಾಯಿ

Praja Vahini March 13, 2026 1 minute read
WhatsApp Image 2026-03-13 at 13.20.42
Spread the love

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ನಾಗಮೋಹನ್ ದಾಸ್ ವರದಿ ಆಧರಿಸಿ ಒಳಮೀಸಲಾತಿ ಜಾರಿ ಮಾಡಬೇಕು, ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗಳಿಗೆ ಸದಾ ಕಾಲ ಅನ್ಯಾಯ ಮಾಡುತ್ತ ಬಂದಿದೆ‌. ಅವರ ವಿಚಾರ ಬಂದಾಗ ಯಾವುದೇ ಸ್ಪಷ್ಡವಾಗಿರುವ ನಿಲುವು ನಿರ್ಧಾರ ತೆಗೆದುಕೊಂಡಿಲ್ಲ ಹಿಂದೆ ಐದು ವರ್ಷ ಸಿದ್ದರಾಮಯ್ಯ ಸಿಎಂ ಆದಾಗ ಒಳ ಮೀಸಲಾತಿ ಹೋರಾಟ, ಎಸ್ಟಿ ಎಸ್ಸಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಕೂಗು ಕೇಳಿತು. ಸ್ವಾಮೀಜಿಗಳು ಪಾದಯಾತ್ರೆ ಮಾಡಿದರು. ಹಿಂದುಳಿದ ವರ್ಗದ ಸ್ವಾಮೀಜಿಗಳು ಪಾದಯಾತ್ರೆ ಮಾಡಿದರು. ಅಹಿಂದ ನಾಯಕ ಅಂತ ಹೇಳುವ ಸಿಎಂ ಮುಸ್ಲೀಮರನ್ನು ಬಿಟ್ಟು ಅಹಿಂದ ವರ್ಗಕ್ಕೆ ಬದುಕಿನಲ್ಲಿ ಬದಲಾಗುವ ಯಾವುದೇ ಯೋಜನೆ ಮಾಡಿಲ್ಲ ಎಂದು ಆರೋಪಿಸಿದರು.

ಎಸ್ಸಿ ಎಸ್ಟಿ ಹಣ ಬೇರೆಡೆ ಖರ್ಚು

ಎಸ್ಸಿ ಎಸ್ಟಿ ಗೆ ಮೀಸಲಿಟ್ಟ ಅನುದಾನ ವರ್ಗಾಯಿಸಿ ಬೇರೆ ಕಡೆ ಖರ್ಚು ಮಾಡುತ್ತೀರಿ ಅದರ ಬಗ್ಗೆ ಏನೂ ಅನಿಸುವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ಸುಮಾರು 60 ಸಾವಿರ ಕೋಟಿ ಹಣ ಬೇರೆ ಕಡೆಗೆ ಖರ್ಚಾಗಿದೆ. ಬಜೆಟ್ ನಲ್ಲಿ ಒಬಿಸಿಗೆ 441ಕೋಟಿ ರೂ. ಇಟ್ಟಿದ್ದರು. ಅದನ್ನು ಜಾತಿ ಗಣತಿ ಮಾಡಲು ಇಟ್ಟರು. ಅದನ್ನು ರಾಜ್ಯದ ಬೊಕ್ಕಸದಿಂದ ಖರ್ಚು ಮಾಡಬೇಕಿತ್ತು. ನಿಗಮ ಮಂಡಳಿಗಳಲ್ಲಿ ಎಸ್ಸಿ ಎಸ್ಟಿ ಶಾಸಕರೆ ಗಂಗಾ ಕಲ್ಯಾಣಕ್ಕೆ ಹಣ ನಿಡಿಲ್ಲ ಅಂತ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಒಳ ಮೀಸಲಾತಿಯ ಬಗ್ಗೆ ಸ್ಪಷ್ಟತೆ ಇಲ್ಲ ಈ ಜನಾಂಗದ ಬಗ್ಗೆ ಕಳಕಳಿ ಇಲ್ಲ.  ನಾವು ಮಿಸಲಾತಿ ಹೆಚ್ಚಳ ಮಾಡಿದ್ದು ಚುನಾವಣೆ ಗಿಮಿಕ್ ಅಂದರು, ನಾವು ನವೆಂಬರ್ ನಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದೇವು ಚುನಾವಣೆ ಎಪ್ರಿಲ್ ನಲ್ಲಿ ನಡೆಯಿತು‌. ಇದನ್ನೂ ಓದಿ: ಅಡಿಗೆ ಅನಿಲ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ: ಕೆಹೆಚ್. ಮುನಿಯಪ್ಪ

ಅಂಬೇಡ್ಕರ್ ಅವರು ಎಸ್ಸಿ ಎಸ್ಡಿ ಜನಾಂಗಕ್ಕೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಬೇಕು ಎಂದು ಹೇಳಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಮೀಸಲಾತಿ ಹೆಚ್ಚಳ ಮಾಡಲು ನ್ಯಾ. ನಾಗಮೊಹನ್ ದಾಸ್ ಸಮಿತಿ ವರದಿ ನೀಡಿತ್ತು. ಆ ವರದಿಯಂತೆ ನಾವು ಸಂಪುಟದಲ್ಲಿ ಒಪ್ಪಿಗೆ ಪಡೆದು ಕಾನೂನು ಮಾಡಿ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಅಡಿಗೆ ಅನಿಲ ಕುರಿತು ಅಧಿಕಾರಿಗಳೊಂದಿಗೆ ಮಹತ್ವದ ಸಭೆ: ಕೆಹೆಚ್. ಮುನಿಯಪ್ಪ
Next: ಬಳ್ಳಾರಿ ಜನತೆಗೆ ಸಿಹಿ ಸುದ್ದಿ ನೀಡಿದ ಸಚಿವ ಎಂ ಬಿ ಪಾಟೀಲ್

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.