Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ವೋದಯ, ಅಂತ್ಯೋದಯದ ಪರವಾಗಿ ಪತ್ರಕರ್ತರು ಇರಬೇಕು: ಸಿಎಂ
  • Bangalore
  • Politics
  • State

ಸರ್ವೋದಯ, ಅಂತ್ಯೋದಯದ ಪರವಾಗಿ ಪತ್ರಕರ್ತರು ಇರಬೇಕು: ಸಿಎಂ

Praja Vahini March 14, 2026 1 minute read
WhatsApp Image 2026-03-14 at 11.38.57
Spread the love

ಬೆಂಗಳೂರು: ಪತ್ರಕರ್ತರೂ ಆಗಿದ್ದ ಮಹಾತ್ಮಗಾಂಧಿಯವರ ಮಾತಿನಂತೆ ಸರ್ವೋದಯ, ಅಂತ್ಯೋದಯದ ಪರವಾಗಿ ಪತ್ರಕರ್ತರು ಇರಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ಅಸಮಾನತೆ ಕಾಣುತ್ತಿದ್ದೇವೆ. ಅಂಬೇಡ್ಕರ್ ಅವರೂ ಪತ್ರಕರ್ತರಾಗಿದ್ದರು. ಈ ಅಸಮಾನತೆ ಹೋಗದೆ ಹೋದರೆ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ ಎನ್ನುವ ಮಾತನ್ನು ಅಂಬೇಡ್ಕರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ಮಾಧ್ಯಮ‌ ಅಕಾಡೆಮಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಯ್ಕೆಯಾದ ಪತ್ರಕರ್ತರಿಗೆ “2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು” ವಿತರಿಸಿ, ಸನ್ಮಾನಿಸಿ ಮಾತನಾಡಿದ ಅವರು, ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ನಾನು ನಿತ್ಯ ದಿನಪತ್ರಿಕೆಗಳನ್ನು ಓದಿದ ಬಳಿಕವೇ ಇತರೆ ಕಾರ್ಯಗಳಿಗೆ ಮುಂದಾಗುತ್ತೇನೆ. ಪತ್ರಿಕೆಗಳು ಇನ್ನೂ ಹೆಚ್ಚಿನ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ನಾನು ಟಿವಿ ನೋಡುವುದು ಕಡಿಮೆ ಎಂದರು.

ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ. ಸತ್ಯ ಬರೆಯುವ ಮತ್ತು ಸಂಶೋಧನೆ ನಡೆಸಿ ಬರೆಯುವ ಪತ್ರಕರ್ತರ ಸಂಖ್ಯೆ ಸುಳ್ಳು ಬರೆಯುವ ಪತ್ರಕರ್ತರ ಸಂಖ್ಯೆಗಿಂತ ಹೆಚ್ಚಾಗಬೇಕು ಎಂದು ಕರೆ ನೀಡಿದರು. ಒಂದು ಗುಂಪು ಅಥವಾ ಒಂದು ಸಿದ್ಧಾಂತಕ್ಕೆ ಮಾರು ಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು ಎಂದರು. ಇದನ್ನೂ ಓದಿ:  ಪ್ರಯಾಣಿಕರಿಗೆ KSRTC ವತಿಯಿಂದ ಭರ್ಜರಿ ಸಿಹಿ ಸುದ್ದಿ!

ಹೊಸ ತಂತ್ರಜ್ಞಾನದ ಜೊತೆಗೆ ಮಾಧ್ಯಮ ರಂಗ ಮತ್ತು ಪತ್ರಕರ್ತರೂ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕು. ಹೊಸ ಸವಾಲುಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಹದಗೊಳ್ಳಬೇಕು ಎಂದರು.

About the Author

Praja Vahini

Editor

View All Posts

Spread the love

Post navigation

Previous: ಪ್ರಯಾಣಿಕರಿಗೆ KSRTC ವತಿಯಿಂದ ಭರ್ಜರಿ ಸಿಹಿ ಸುದ್ದಿ!
Next: ಬಾಬಾ ಸಾಹೇಬರ ಜಯಂತೋತ್ಸವ ಸಮಿತಿ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.