ದಾವಣಗೆರೆ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಇರುವುದರಿಂದ ಇದೀಗ ಹೋಟೆಲ್ ಮಾಲೀಕರು ಗೃಹ ಬಳಕೆಯ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದಾವಣಗೆರೆಯ ಜಗಳೂರಿನಲ್ಲಿ 20 ಗೃಹ ಬಳಕೆಯ ಸಿಲಿಂಡರ್ ಗಳನ್ನು ಜಪ್ತಿ ಮಾಡಲಾಗಿದೆ.
ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ ನಡೆಸಿದಾಗ ಗೃಹ ಬಳಕೆಯ ಸಿಲಿಂಡರ್ಗಳು ಪತ್ತೆಯಾಗಿವೆ. ಇದನ್ನೂ ಓದಿ: ಕೆಡಿ ಸಿನಿಮಾಗೆ ರಿಲೀಸ್ಗು ಮುನ್ನ ಸಂಕಷ್ಟ
