ಬೆಂಗಳೂರು: ವಿದ್ಯಾರ್ಥಿಗಳ ಜೀವನದಲ್ಲಿ 10ನೇ ತರಗತಿ ಪರೀಕ್ಷೆ ಎನ್ನುವುದು ಒಂದು ಮಹತ್ವದ ಘಟ್ಟವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯಿಂದ (ಮಾರ್ಚ್ 18) ಪ್ರಾರಂಭವಾಗುತ್ತಿರುವ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸದನದಲ್ಲಿ ಶುಭ ಕೋರಿದರೆ.
ಈ ಬಾ8,65,968 ವಿದ್ಯಾರ್ಥಿಗಳು SSLC ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, 3 ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ 2ನೇ ಹಂತ, 3ನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೇ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು. ಇದನ್ನೂ ಓದಿ: ಈ ಬಾರಿ ಬಜೆಟ್ ನಲ್ಲಿ ಸಣ್ಣ ನೀರಾವರಿ ಯೋಜನೆಗಳಿಗೆ 490 ಕೋಟಿ ಮೀಸಲು: ಎಂ ಸಿ ಸುಧಾಕರ್
ಇನ್ನು SSLC ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಶುಭಾಶಯ ಕೋರಿ, ಈ ಹಿಂದೆ ಮಕ್ಕಳು ಒತ್ತಡದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದರು. ಈಗ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಆತಂಕಪಡದೇ ಪರೀಕ್ಷೆಗೆ ಹಾಜರಾಗಲು ತಿಳಿಸಿ, ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
