ದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಅವರನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಇಂದು (ಬುಧವಾರ ಮಾರ್ಚ್ 18)ರಂದು ಭೇಟಿ ಮಾಡಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಹಾಗೂ ಸ್ಕೈಡೆಕ್ ನಿರ್ಮಾಣ ಸಂಬಂಧ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಸಚಿವ ಬೋಸರಾಜು, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಸಂಸದ ಕುಮಾರ ನಾಯಕ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.
