ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಕ್ಷೇತ್ರಗಳು ರಂಗೇರುತ್ತಿದ್ದು, ಇದೀಗ ಬಿಜೆಪಿಯು ಎರಡು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಯುಗಾದಿ ಹಬ್ಬದಂದೆ ಘೋಷಿಸಿದೆ.
ಹೌದು, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಹಾಗೂ ಬಾಗಲಕೋಟೆ ಕ್ಷೇತ್ರಕ್ಕೆ ವೀರಣ್ಣ ಚರಂತಿಮಠ, ಅವರನ್ನು ಅಭ್ಯರ್ಥಿಗಳಾಗಿ ಬಿಜೆಪಿ ಘೋಷಿಸಿದೆ. ಎಸ್ಟಿ ಸಮುದಾಯದ ಟಿ.ಶ್ರೀನಿವಾಸದಾಸ ಕರಿಯಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಅಹಿಂದ ಮತ್ತು ಲಿಂಗಾಯತ ವರ್ಗದ ಮತಗಳ ಮೇಲೆ ಪಕ್ಷ ಕಣ್ಣಿಟ್ಟಿದೆ.
ಇನ್ನು ಯಾರಿಗೇ ಟಿಕೆಟ್ ಕೊಟ್ರೂ ಕೆಲಸ ಮಾಡೋದಾಗಿ ಎರಡೂ ಬಣಗಳಿಂದ ಘೋಷಣೆ ಮಾಡಲಾಗಿದೆ. ಹೀಗಾಗಿ, ಸಿದ್ದೇಶ್ವರ್ ಬಣದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರೂ ರೇಣುಕಾಚಾರ್ಯ ಬಣದ ಜತೆಗೂ ಉತ್ತಮ ಬಾಂಧವ್ಯ ಇಟ್ಟುಕೊಂಡ ಶ್ರೀನಿವಾಸ ದಾಸಕರಿಯಪ್ಪಗೆ ಟಿಕೆಟ್ ಒಲಿದು ಬಂದಿದೆ. ಇದನ್ನೂ ಓದಿ: ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿಸಿಎಂ ಡಿಕೆಶಿ
