ಬೆಂಗಳೂರು: ಕಳೆದ ಎರಡು ದಿನಗಳಿಂದ ಕರ್ನಾಟಕ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ನಿನ್ನೆ (ಬುಧವಾರ ಮಾ.18) ರಂದು ರಾಜ್ಯದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಬೆಂಗಳೂರಿನ ಎಂಜಿ ರಸ್ತೆ ಸೇರಿದಂತೆ ಕೋರಮಂಗಲದಂತಹ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಇದನ್ನೂ ಓದಿ: ಬೈ ಎಲೆಕ್ಷನ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಜಪ್ತಿ
ಅಲ್ಲದೆ ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ,ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು,ಹಾಸನ,ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
