ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿಗೆ ಬಜೆಟ್ ಮಂಡಿಸಿ ಇತಿಹಾಸ ಸೃಷ್ಟಿಸಿದ್ದು, ಸಿಎಂ ಮಂಡಿಸಿದ ಬಜೆಟ್ ಕುರಿತು ವಿರುದ್ಧ ಪಕ್ಷದ ನಾಯಕರು ಟೀಕೆ ಮಾಡಿದ್ದಾರೆ. ವಿರೋಧ ಪಕ್ಷದ ಟೀಕೆಗಳಿಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ಕಾಗಿ ಉತ್ತರ ನೀಡಿದ್ದಾರೆ.
ಈ ಕುರಿತು ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಬಜೆಟ್ ಖಾಲಿ ಚೊಂಬಲ್ಲ, ತುಂಬಿದ ಕೊಡ ಎಂದು ವಿರೋಧ ಪಕ್ಷದ ಟೀಕೆಗಳಿಗೆ ತಿರುಗೇಟು ನೀಡಿದರು. ಈ ಬಾರಿ ಬಜೆಟ್ ಚರ್ಚೆಯಲ್ಲಿ ಒಟ್ಟು 50 ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿದ್ದು, ಒಟ್ಟಾರೆ 24 ಗಂಟೆ 45 ನಿಮಿಷಗಳ ಕಾಲ ಚರ್ಚೆ ನಡೆದಿದೆ ಎಂದು ತಿಳಿಸಿದರು.
ನಾನು 17 ಬಾರಿ ಬಜೆಟ್ ಮಂಡಿಸಿ ಉತ್ತರ ನೀಡಿದ್ದೇನೆ. ಆದರೆ ಇಷ್ಟು ವಿಸ್ತೃತ ಚರ್ಚೆ ನಡೆದಿರುವುದು ಇದೇ ಮೊದಲು, ಎಂದು ಸಿಎಂ ಹೇಳಿದರು.
ವಿಪಕ್ಷ ನಾಯಕರು ಆಳವಾದ ಅಧ್ಯಯನ ಮಾಡಿಲ್ಲ. ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಕರ್ಷಕ ಶೀರ್ಷಿಕೆ ಸಿಗಲೆಂದು ಪದಗಳನ್ನು ಬಳಸಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸಿಎಂ ಕುರ್ಚಿ ಬಗ್ಗೆ ವಿಧಾನಸಭೆಯಲ್ಲಿ ಅಚ್ಚರಿ ಹೇಳಿಕೆ!
ಯಾರು ಎಷ್ಟೇ ಟೀಕೆ ಮಾಡಿದರೂ ಮಾವಿನ ಹಣ್ಣು ಬೇವಿನ ಹಣ್ಣಾಗಲು ಸಾಧ್ಯವಿಲ್ಲ. ರಾಜ್ಯದ ಜನರು ಬುದ್ಧಿವಂತರಾಗಿದ್ದು, ಮಾವಿನ ಹಣ್ಣನ್ನು ಮಾವಿನ ಹಣ್ಣು ಎಂದೇ ಕರೆಯುತ್ತಾರೆ ಎಂದು ತಮ್ಮ ಬಜೆಟ್‌ನ್ನು ಸಮರ್ಥಿಸಿಕೊಂಡರು.
