ಕೊಪ್ಪಳ: ಇತ್ತೀಚಿನ ದಿನಗಳಲ್ಲಿ ಕೆಲ ಸರ್ಕಾರಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಲಂಚ ಪಡೆದು ಅಕ್ರಮ ಆಸ್ತಿ ಮಾಡುತ್ತಿರುವುದು ಹೆಚ್ಚು ಕಂಡು ಬರುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ ಇದೀಗ ಕೊಪ್ಪಳದಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಯ ವಿರುದ್ಧ ದಾಳಿ ನಡೆಸಿದ್ದು, ದಾಳಿ ಮೇಲೆ ಸುಮಾರು 10 ಕೋಟಿ ವಶಕ್ಕೆ ಪಡೆದುಕೊಂಡಿದ್ದಾರೆ.
ಅಲ್ಲದೆ ಭ್ರಷ್ಟಾಚಾರದಿಂದ 10 ಕೋಟಿ ನಗದು ಇಟ್ಟುಕೊಂಡಿದ್ದ ಕೊಪ್ಪಳ ನಗರ ಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಯಾರು ಎಷ್ಟೇ ಟೀಕೆ ಮಾಡಿದರೂ ಮಾವಿನ ಹಣ್ಣು ಬೇವಿನ ಹಣ್ಣಾಗಲು ಸಾಧ್ಯವಿಲ್ಲ: ಸಿಎಂ
ಹೌದು, 2023-24 ಹಾಗೂ 24-25ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದಾಗ ವಿಚಾರ ಬಯಲಿಗೆ ಬಂದಿದೆ. ಸದ್ಯ ಪೌರಾಡಳಿತ ಇಲಾಖೆ ನಿರ್ದೇಶಕರು ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.
