Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ
  • Politics
  • State
  • ಬಾಗಲಕೋಟೆ

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ: ಸಿಎಂ

Praja Vahini March 31, 2026
WhatsApp Image 2026-03-31 at 15.41.03
Spread the love

ಬಾಗಲಕೋಟೆ: ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಒಂದು ಕಡೆ ದಾವಣಗೆರೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಚಾರದಲ್ಲಿ ತೊಡಗಿದರೆ ಮತ್ತೊಂದು ಕಡೆ ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಪಚುನಾವಣೆಯ ಕುರಿತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿ ಕುರಿತು ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ.ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರ ಗೆಲ್ಲುವ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ನಾವು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದೇವೆ: ಡಿಕೆಶಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ.  ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ

ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ.  ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ನಾವು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದೇವೆ: ಡಿಕೆಶಿ
Next: ಇನ್ಮುಂದೆ ಘನತ್ಯಾಜ್ಯ ನಿರ್ವಹಣೆಯಲ್ಲಿ ಹೊಸ ನಿಯಮ ಜಾರಿ; ಪಾಲಿಸದಿದ್ದರೆ ಜಿಬಿಎ ವತಿಯಿಂದ ದಂಡ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.