Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಯವರು ಬಡವರ ಯೋಜನೆಗಳನ್ನು ವಿರೋಧಿಸುತ್ತಾರೆ: ಸಿಎಂ
  • Politics
  • State
  • ದಾವಣಗೆರೆ

ಬಿಜೆಪಿಯವರು ಬಡವರ ಯೋಜನೆಗಳನ್ನು ವಿರೋಧಿಸುತ್ತಾರೆ: ಸಿಎಂ

Praja Vahini April 1, 2026 1 minute read
WhatsApp Image 2026-04-01 at 16.59.01
Spread the love

ದಾವಣಗೆರೆ: ಬಿಜೆಪಿಯವರು ಬಡವರ ಯೋಜನೆಗಳಾದ ಗ್ಯಾರಂಟಿಗಳನ್ನು ವಿರೋಧಿಸುತ್ತಾರೆ. ಒಟ್ಟು ಗ್ಯಾರಂಟಿ ಯೋಜನೆಗೆ ಸುಮಾರು 1,31,000 ಕೋಟಿ ರೂ.ಗಳನ್ನು ನಾವು ವ್ಯಯ ಮಾಡಿ ಜನ ಸಾಮಾನ್ಯರ ಬದುಕಿಗೆ ಅರ್ಪಿಸಿದ್ದೇವೆ.  ದಾವಣಗೆರೆ ದಕ್ಷಿಣ ಕ್ಷೇತ್ರ ಒಂದರಲ್ಲಿ 535 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಇಂದು (ಬುಧವಾರ ಏ. 01) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿಯವರು ತಮ್ಮತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬಂದಿವೆ ಎಂದರು.

ಕಾಂಗ್ರೆಸ್ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಲ್ಲಿ ನಂಬಿಕೆಯಿರಿಸಿ, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ಸಮಾಜದ ಕಟ್ಟಕಡೆಯ ಕಷ್ಟಗಳಿಗೆ ಸ್ಪಂದಿಸುವುದು ಮುಖ್ಯ ಎಂದರು.

ಗ್ಯಾರಂಟಿಗಳ ಮೂಲಕ ಸಮಾಜದ ವಿವಿಧ ಜಾತಿಧರ್ಮ ಭಾಷೆಗಳ ಬಡವರಿಗೆ, ಮಧ್ಯವರ್ತಿಗಳ ಹಾವಳಿಯಿಲ್ಲದೇ, ನೇರವಾಗಿ ಅವರ ಖಾತೆಗೆ ಆರ್ಥಿಕ ಲಾಭ ನೀಡಲಾಗುತ್ತಿದೆ ಎಂದರು.

ಬಿಜೆಪಿ ತನ್ನ ಅವಧಿಯಲ್ಲಿ ಹೆಚ್ಚು ಸಾಲ ಮಾಡಿದೆ

ಬಿಜೆಪಿಯವರು ಗ್ಯಾರಂಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತದೆ, ಖಜಾನೆ ಖಾಲಿಯಾಗುತ್ತದೆ ಎಂದು ಟೀಕಿಸುತ್ತಾರೆ. ಆದರೆ ಜನರ ಖಾತೆಗೆ ನೇರವಾಗಿ ಹಣ ತಲುಪುದರಿಂದ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಅಂದರೆ 2023ರ ಮಾರ್ಚ್ ವರೆಗೆ 530000 ಕೋಟಿಗೂ ಹೆಚ್ಚು ಸಾಲ ಮಾಡಿದ್ದರೆ, ನಮ್ಮ ಕಾಂಗ್ರೆಸ್ ಸರ್ಕಾರ, ಕಳೆದ ನಾಲ್ಕು ವರ್ಷದಲ್ಲಿ  256000 ಕೋಟಿ ರೂ. ಸಾಲ ಮಾಡಿದೆ. ಅಂತೆಯೇ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದಾಗ ದೇಶದ ಮೇಲೆ 53.11 ಲಕ್ಷ ಕೋಟಿ ಸಾಲವಿತ್ತು. ಈಗ 218 ಲಕ್ಷ ಕೋಟಿ ಸಾಲವಿದೆ, ಅಂದರೆ ಪ್ರಧಾನಿ ಮೋದಿಯವರ 12 ವರ್ಷದ ಅಧಿಕಾರದ ಅವಧಿಯಲ್ಲಿ 165 ಲಕ್ಷ ಕೋಟಿಯಷ್ಟು ಸಾಲ ಮಾಡಿದ್ದಾರೆ. ಈ ಸಂಖ್ಯೆಯು ಬಿಜೆಪಿ ಸರ್ಕಾರ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಹೆಚ್ಚು ಸಾಲ ಮಾಡಿದೆ ಎಂಬುದನ್ನು ಸೂಚಿಸುತ್ತದೆ ಎಂದರು. ಇದನ್ನೂ ಓದಿ: ಇನ್ಮುಂದೆ ಘನತ್ಯಾಜ್ಯ ನಿರ್ವಹಣೆಯಲ್ಲಿ ಹೊಸ ನಿಯಮ ಜಾರಿ; ಪಾಲಿಸದಿದ್ದರೆ ಜಿಬಿಎ ವತಿಯಿಂದ ದಂಡ

ಕೇಂದ್ರ ಬಜೆಟ್ ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಅಧಿವೇಶನದಲ್ಲಿ ಬಜೆಟ್ ನ ಬಗ್ಗೆ ವಿಸ್ತೃತ ಚರ್ಚೆಗಳಾಗಿದ್ದು, ಈಗಾಗಲೇ ಸುದೀರ್ಘ ಉತ್ತರವನ್ನೂ ನೀಡಲಾಗಿದೆ. ದೇಶದ ಜಿಡಿಪಿಯು 7.14 ರಷ್ಟಿದ್ದರೆ, ರಾಜ್ಯದ ಜಿಡಿಪಿ 8.1 ರಷ್ಟಿದೆ. ರಾಜ್ಯದ ಬಜೆಟ್ನ ಗಾತ್ರ ಈ ಬಾರಿ ಕಳೆದ ವರ್ಷಕ್ಕಿಂತ 9.4 ರಷ್ಟು  ಹೆಚ್ಚಿದೆ. ಕೇಂದ್ರ ಬಜೆಟ್ ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ. ರಾಜ್ಯ ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ, ಬಂಡವಾಳ ಹೂಡಿಕೆಯಲ್ಲಿಯೂ ರಾಜ್ಯ 2 ನೇ ಸ್ಥಾನದಲ್ಲಿದೆ. ಆದಾಗ್ಯೂ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಇನ್ಮುಂದೆ ಘನತ್ಯಾಜ್ಯ ನಿರ್ವಹಣೆಯಲ್ಲಿ ಹೊಸ ನಿಯಮ ಜಾರಿ; ಪಾಲಿಸದಿದ್ದರೆ ಜಿಬಿಎ ವತಿಯಿಂದ ದಂಡ
Next: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ; ರಾಜೇಂದ್ರ ಚೋಳನ್ ಪರಿಶೀಲನೆ

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.