Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ; ಪೊಲೀಸರಿಗೆ ಸಿಎಂ ಸೂಚನೆ
  • Bangalore
  • Politics
  • State

ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ; ಪೊಲೀಸರಿಗೆ ಸಿಎಂ ಸೂಚನೆ

Praja Vahini April 2, 2026
WhatsApp Image 2026-04-02 at 17.11.09
Spread the love

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕೋರಮಂಗಲದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ.

ಹಲವು ರೀತಿಯ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ, ಶಿಕ್ಷೆ ಕೊಡಿಸುವ ಪ್ರಮಾಣದಲ್ಲಿ ಕರ್ನಾಟಕ ರಾಜ್ಯ ಮುಂದಿದೆ. ಇದಕ್ಕಾಗಿ ಪೊಲೀಸ್ ಇಲಾಖೆಗೆ ಅಭಿನಂದನೆಗಳು. ಜೊತೆಗೆ ಯಾವೆಲ್ಲ ಅಪರಾಧಗಳ ಪ್ರಮಾಣ ಹೆಚ್ಚಾಗಿದೆ ಅವುಗಳ ನಿಯಂತ್ರಣದಲ್ಲೂ ನಾವು ಶ್ರಮ ಹಾಕಬೇಕಿದೆ.

ಸೈಬರ್ ಅಪರಾಧಗಳು ಸೇರಿದಂತೆ ನಾನಾ ರೀತಿಯ ಅಪರಾಧಗಳನ್ನು ತಡೆಯಲು ತಂತ್ರಜ್ಞಾನದ ಅವಕಾಶ ಬಳಸಿಕೊಳ್ಳಬೇಕು. ಪೊಲೀಸ್ ಇಲಾಖೆ ಸಮಯದ ಮಿತಿ ಇಲ್ಲದಂತೆ ದಿನದ 24 ಗಂಟೆಯೂ ಕರ್ತವ್ಯಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡುವುದರಿಂದ ಸಮಾಜದಲ್ಲಿ ನೆಮ್ಮದಿ ಮತ್ತು ಸೌಹಾರ್ದತೆ ನೆಲೆಸಿದೆ.

ಮಹಿಳೆಯರು, ಮಕ್ಕಳು ಮತ್ತು ದುರ್ಬಲರು ಹಾಗೂ ಅಸಹಾಯಕರ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದ್ದೇವೆ. ಪೊಲೀಸರೂ ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು.

ರಾಜ್ಯದ ಆರ್ಥಿಕ ಬೆಳವಣಿಗೆಗೂ, ಜಿಡಿಪಿ ಪ್ರಗತಿಗೂ ಹಾಗೂ ರಾಜ್ಯದ ಕಾನೂನು ಸುವ್ಯವಸ್ಥೆಗೂ ನೇರಾನೇರ ಸಂಬಂಧ ಇರುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಿದರೆ ಆರ್ಥಿಕತೆಗೂ ದೊಡ್ಡ ಕೊಡುಗೆ ಕೊಟ್ಟಂತಾಗುತ್ತದೆ.  ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ಒಡೆತನದ ಪರಿಶ್ರಮ ನೀಟ್ ಅಕಾಡೆಮಿಯಲ್ಲಿ ದೋಖಾ!?

ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯ ಆಗಬೇಕು ಎನ್ನುವ ಗುರಿ ನಮ್ಮ ಸರ್ಕಾರದ್ದಾಗಿದೆ. ಇದು ಪೊಲೀಸ್ ಇಲಾಖೆಯ ಗುರಿಯೂ ಆಗಬೇಕಿದೆ. ಪದಕ ವಿಜೇತರೆಲ್ಲರಿಗೂ ಶುಭಾಶಯಗಳು, ಇವರ ಕಾರ್ಯ ಮತ್ತು ವೃತ್ತಿಪರತೆ ಇತರರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸುತ್ತೇನೆ.

About the Author

Praja Vahini

Editor

View All Posts

Spread the love

Post navigation

Previous: ಶಾಸಕ ಪ್ರದೀಪ್ ಈಶ್ವರ್ ಒಡೆತನದ ಪರಿಶ್ರಮ ನೀಟ್ ಅಕಾಡೆಮಿಯಲ್ಲಿ ದೋಖಾ!?
Next: ಅಭ್ಯರ್ಥಿಗಳ ಗೆಲುವಿಗಾಗಿ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿದ ಸಿಎಂ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.