ವಿಜಯಪುರ: ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಒಂದಲ್ಲ ಒಂದು ರೀತಿ ಸುದ್ದಿ ಆಗುತ್ತಲೇ ಇರುತ್ತಾರೆ. ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದಾರೆ.
ಹೌದು, ನಾನೇನಾದರೂ ಸಿಎಂ ಆದರೆ ಮೊದಲ ಕ್ಯಾಬಿನೆಟ್ ನಲ್ಲಿಯೇ ಮುಸ್ಲಿಮರನ್ನ ಅಲ್ಪಸಂಖ್ಯಾತರ ಪಟ್ಟಿಯಿಂದ ಹೊರ ಹಾಕುತ್ತೇನೆ ಎಂದು ಹೇಳುವ ಮೂಲಕ ಇದೀಗ ಮುಸ್ಲಿಮರ ಕೆಂಗಣ್ಣಿಗೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಗುರಿಯಾಗಿದ್ದಾರೆ.
ಈ ಕುರಿತು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಭ್ಯರ್ಥಿಗಳ ಗೆಲುವಿಗಾಗಿ ಹಜರತ್ ಖಡಕ್ ಶಾ ವಲಿ ದರ್ಗಾಗೆ ಭೇಟಿ ನೀಡಿದ ಸಿಎಂ
ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ ತರಹ ರಾಜ್ಯಭಾರ ಮಾಡುತ್ತೇನೆ. ಸಿಎಂ ಆದ ಮೊದಲ ಕ್ಯಾಬಿನೆಟ್ ಸಭೆಯಲ್ಲೇ ಅಲ್ಪಸಂಖ್ಯಾತ ಪಟ್ಟಿಯಿಂದ ಮುಸ್ಲಿಮರನ್ನು ಹೊರಹಾಕುತ್ತೇನೆ. ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರಿಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡ್ತೆನೆ ಎಂದಿದ್ದಾರೆ.
